ಬೆಳಗಾವಿ :ಬೆಳಗಾವಿಯ ಅತ್ಯಂತ ಜನಪ್ರಿಯ ಜಿಲ್ಲಾಧಿಕಾರಿಯಾಗಿ ಹೆಸರುವಾಸಿಯಾಗಿದ್ದ ಎನ್. ಜಯರಾಮ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಬೆಳಗಾವಿಯಲ್ಲಿ ಸುಮಾರು ನಾಲ್ಕು ವರ್ಷಗಳಷ್ಟು ಸುದೀರ್ಘ ಕಾಲ ಎನ್. ಜಯರಾಮ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರ ಕೆಲಸ ಕಾರ್ಯಗಳು ಜನ ಮೆಚ್ಚುಗೆ ಪಾತ್ರವಾಗಿ ಅತ್ಯಂತ ಜನಪ್ರಿಯ ಜಿಲ್ಲಾಧಿಕಾರಿ ಎಂಬ ಹಿರಿಮೆಗೆ ಅವರು ಪಾತ್ರರಾಗಿದ್ದರು. ಇದೀಗ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದು ಬೆಳಗಾವಿ ಜಿಲ್ಲೆಯ ಜನತೆಗೆ ಹೆಮ್ಮೆ ತಂದಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.