LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

ಬೆಂಗಳೂರು :ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದಾರೆ. ನ್ಯಾ. ವಿಭು ಭಕ್ರು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಜೊತೆಗೆ ಹಲವಾರು ನ್ಯಾಯಮಂಡಳಿಗಳಲ್ಲಿ ಅಭ್ಯಾಸ ಮಾಡಿದ್ದಾರೆ. ಅವರು ಈ ವರ್ಷ ಜ.21 ರವರೆಗೆ ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು.

ಕರ್ನಾಟಕ ಹೈಕೋರ್ಟ್‌ ಮಾತ್ರ ಅಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ ಸಹ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಸಹ ನೇಮಿಸಲಾಗಿದೆ. ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್‌ ಸಚ್‌ದೇವ, ಜಾರ್ಖಂಡ್ ಹೈಕೋರ್ಟ್‌ಗೆ ತಾರ್‌ಲೋಕ್‌ ಸಿಂಗ್ ಚೌಹಾಣ್, ಗುವಾಹಟಿ ಹೈಕೋರ್ಟ್‌ಗೆ ಅಶುತೋಷ್ ಕುಮಾರ್, ಪಾಟ್ನಾ ಹೈಕೋರ್ಟ್‌ಗೆ ವಿಪುಲ್ ಮನುಭಾಯ್ ಪಾಂಚೋಲಿ ಅವರನ್ನು ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಭಕ್ರು ಅವರು 1966ರಲ್ಲಿ ನಾಗ್ಪುರದಲ್ಲಿ ಜನಿಸಿದರು. ಅವರು ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿಯೂ ಅರ್ಹತೆ ಪಡೆದಿದ್ದರು. ಆನಂತರ 1990ರಲ್ಲಿ ಎಲ್‌ಎಲ್‌ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು.

ನ್ಯಾ. ಭಕ್ರು ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್‌, ದೆಹಲಿ ಹೈಕೋರ್ಟ್‌, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್‌ 17ರಂದು ದೆಹಲಿ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್‌ 18ರಂದು ಖಾಯಂಗೊಂಡಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026