Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಾಗಮಲೆ ಚಿರತೆ ದಾಳಿ ಪ್ರಕರಣ: ಬಾಲಕನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ರಾಜ್ಯ ಸರ್ಕಾರ ₹20 ಲಕ್ಷ ಪರಿಹಾರ ಘೋಷಿಸಿದೆ. ಭಾನುವಾರ (ಮೇ 10) ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿ ಬಾಲಕನನ್ನು ಬಲಿ ಪಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದು, ಈಗಾಗಲೇ ₹5 ಲಕ್ಷದ ಚೆಕ್ ಹಸ್ತಾಂತರಿಸಲಾಗಿದೆ. ಉಳಿದ ಮೊತ್ತವನ್ನು ಬ್ಯಾಂಕ್ ಖಾತೆ ವಿವರ ಪಡೆದು ಶೀಘ್ರದಲ್ಲೇ ಜಮಾ ಮಾಡಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಇದೇ ವೇಳೆ ಬಾಲಕನ ಮೇಲೆ ದಾಳಿ ನಡೆಸಿದ ಚಿರತೆಯ ಚಲನವಲನ ಥರ್ಮಲ್ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ನಾಲ್ಕು ಬೋನುಗಳನ್ನು ಅಳವಡಿಸಲಾಗಿದ್ದು, 30ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಥರ್ಮಲ್ ಡ್ರೋನ್ ತಂಡ ರಾತ್ರಿಯಿಡೀ ಚಿರತೆಯ ಮೇಲೆ ನಿಗಾ ವಹಿಸಿದೆ. ಭದ್ರತಾ ದೃಷ್ಟಿಯಿಂದ ನಾಗಮಲೆಗೆ ಭಕ್ತರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಏನಿದು ಘಟನೆ?
ಬೆಂಗಳೂರು ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ನಿವಾಸಿಯಾದ ಹರ್ಷಿತ್ ಗೌಡ ಕುಟುಂಬದೊಂದಿಗೆ ನಾಗಮಲೆಗೆ ಪಾದಯಾತ್ರೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಭಾನುವಾರ ಬೆಳಿಗ್ಗೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಸಮೀಪ ಚಿರತೆ ಏಕಾಏಕಿ ದಾಳಿ ನಡೆಸಿ, ಪೋಷಕರ ಕಣ್ಣೆದುರೇ ಬಾಲಕನನ್ನು ಎಳೆದೊಯ್ದು ಕೊಂದಿದೆ. ಕುಟುಂಬಸ್ಥರ ಆಕ್ರಂದನದ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದಾಗ, ಅರಣ್ಯದೊಳಗೆ ಬಾಲಕನ ಶವ ಪತ್ತೆಯಾಯಿತು.

ಘಟನೆ ಬಳಿಕ ಬಾಲಕನ ಕುಟುಂಬಸ್ಥರು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾಡಿನೊಳಗೆ ಬಿಡಲು ₹200 ಹೆಚ್ಚುವರಿ ಹಣ ಪಡೆದಿದ್ದರು. ಮಗು ಮೇಲೆ ದಾಳಿ ನಡೆದ ಬಳಿಕ ಅರ್ಧ ಗಂಟೆಯಾದರೂ ಯಾವ ಅಧಿಕಾರಿಯೂ ಸ್ಥಳಕ್ಕೆ ಬಂದಿರಲಿಲ್ಲ. ಜನರು ಪ್ರತಿಭಟನೆ ನಡೆಸಿದ ಬಳಿಕವೇ ಶೋಧ ಕಾರ್ಯ ಆರಂಭಿಸಿದರು. ನಮ್ಮ ಮಗುವಿಗೆ ಆದ ದುಸ್ಥಿತಿ ಮತ್ತಾರಿಗೂ ಆಗಬಾರದು. ಈ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ” ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ