Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚಿತ್ರಕಲಾವಿದ ಸಿ.ಕಣ್ಮೇಶ್‌ಗೆ ಪಿ.ಆರ್.ಟಿ ರಾಜ್ಯ ಮಟ್ಟದ ಪ್ರಶಸ್ತಿ- ನಾಗರಾಜ್‌ ಬೇದ್ರೆ

ಚಿತ್ರಕಲಾವಿದ ಸಿ.ಕಣ್ಮೇಶ್‌ಗೆ ಪಿ.ಆರ್.ಟಿ ರಾಜ್ಯ ಮಟ್ಟದ ಪ್ರಶಸ್ತಿ- ನಾಗರಾಜ್‌ ಬೇದ್ರೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಎಸ್.ಜೆ.ಎಂ.ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದಲೂ ಕೆಲಸ ಮಾಡುತ್ತಿರುವ ಚಿತ್ರಕಲಾವಿದ ಸಿ.ಕಣ್ಮೇಶ್‌ರವರಿಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆಯ ಪಿ.ಆರ್.ತಿಪ್ಪೇಸ್ವಾಮಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಸೆ.೨೦ ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರದಾನ ಮಾಡುತ್ತಿರುವುದು ಜಿಲ್ಲೆಗೆ ಹೆಮ್ಮೆ ಎಂದು ನಾಗರಾಜ್‌ಬೇದ್ರೆ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್.ಜೆ.ಎಂ.ಚಿತ್ರಕಲಾ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ಸಿ.ಕಣ್ಮೇಶ್‌ರವರು ಬಡುಕಟ್ಟು ಸಮುದಾಯ ಹಾಗೂ ಜಾನಪದಕ್ಕೆ ಸಂಬಂಧಿಸಿದಂತೆ ಹೆಚ್ಚು ಚಿತ್ರಕಲೆಗಳನ್ನು ರಚಿಸಿ ಕಲೆಗಾಗಿಯೇ ಜೀವನವನ್ನು ಮುಡುಪಾಗಿಟ್ಟಿದ್ದಾರೆಂದು ಹೇಳಿದರು.

ಪ್ರಕಾಶ್ ರಾಮನಾಯ್ಕ ಮಾತನಾಡಿ ಪಿ.ಆರ್.ತಿಪ್ಪೇಸ್ವಾಮಿ ಕೇವಲ ಜಾನಪದ ಕಲಾವಿದರಷ್ಟೆ ಅಲ್ಲ. ಲಲಿತಕಲಾ ಅಕಾಡೆಮಿ ಅಧ್ಯಕ್ಷರಾಗಿ ಜಾನಪದ ವಸ್ತುಗಳನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಉಳಿಸಿದ್ದಾರೆ. ಚಿತ್ರಕಲೆಗೆ ಸಂಬಂಧಿಸಿದಂತೆ ಅನೇಕ ಪುಸ್ತಕಗಳನ್ನು ಬರೆದು ಕಾಲೇಜುಗಳಿಗೆ ನೀಡಿದ್ದಾರೆ. ಧಮಸ್ಥಳದಲ್ಲಿರುವ ಮ್ಯೂಸಿಯಂನಲ್ಲಿ ಪಿ.ಆರ್.ತಿಪ್ಪೇಸ್ವಾಮಿರವರ ಸಂಗ್ರಹಗಳು ಇಂದಿಗೂ ಇವೆ. ಅವಿವಾಹಿತರಾಗಿದ್ದುಕೊಂಡು ಕಲೆಗಾಗಿಯೇ ಜೀವನವನ್ನು ಮುಡುಪಾಗಿಟ್ಟ ಪಿ.ಆರ್.ತಿಪ್ಪೇಸ್ವಾಮಿ ಪ್ರಶಸ್ತಿ ಸಿ.ಕಣ್ಮೇಶ್‌ಗೆ ಸಿಕ್ಕಿರುವುದು ಅವರ ಪರಿಶ್ರಮಕ್ಕೆ ತಕ್ಕ ಫಲ. ಪ್ರಶಸ್ತಿಯು ೨೫ ಸಾವಿರ ರೂ.ನಗದು, ಸ್ಮರಣಿಕೆಯನ್ನೊಳಗೊಂಡಿರುತ್ತದೆ ಎಂದರು.

ಜಾನಪದ ಹಾಡುಗಾರ ಹರೀಶ್ ಮಾತನಾಡುತ್ತ ಜನಪದ ಚಿತ್ರಗಳ ಮೂಲಕ ಕಲೆಯನ್ನು ಚಿತ್ರಿಸುವ ಅದ್ಬುತ ಕಲಾವಿದ ಪಿ.ಕಣ್ಮೇಶ್‌ಗೆ ಪಿ.ಆರ್.ತಿಪ್ಪೇಸ್ವಾಮಿ ರಾಜ್ಯ ಮಟ್ಟದ ಪ್ರಶಸ್ತಿ ದೊರಕಿರುವುದು ಇಡಿ ಚಿತ್ರಕಲೆಗೆ ಸಂದ ಗೌರವ ಎಂದು ಬಣ್ಣಿಸಿದರು.

ಪ್ರಸನ್ನಕುಮಾರ್ ಮಾತನಾಡಿ ಪಿ.ಆರ್.ತಿಪ್ಪೇಸ್ವಾಮಿ ಜಿಲ್ಲೆಯ ಹೆಮ್ಮೆಯ ಕಲಾವಿದರು. ಅಂತಹವರ ಹೆಸರಿನಲ್ಲಿ ಪಿ.ಕಣ್ಮೇಶ್ ರಾಜ್ಯದ ಮುಖ್ಯಮಂತ್ರಿಯಿಂದ ಪ್ರಶಸ್ತಿ ಸ್ವೀಕರಿಸುವುದು ಅವರ ಕಲೆಗೆ ಸಿಕ್ಕ ಗರಿಮೆ ಎಂದು ಗುಣಗಾನ ಮಾಡಿದರು.
ಸೈಯದ್ ಖುದ್ದೂಸ್, ರಮೇಶ, ತಿಮ್ಮಾರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ