LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್?: ವಿದ್ಯಾರ್ಥಿಗಳ ಧ್ವನಿಯಾಗಿ ಎಎಪಿ ಅಭಿಯಾನ

ಬೆಂಗಳೂರು:ಸರ್ಕಾರಿ ಶಾಲೆ, ಕಾಲೇಜಿನಲ್ಲಿ ಓದಿರುವ, ಓದುತ್ತಿರುವ ವಿದ್ಯಾರ್ಥಿಗಳು ಖಾಸಗಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಿಂತ ಕಡಿಮೆಯಿಲ್ಲ, ಆದರೂ ಸರ್ಕಾರಿ ಕಾಲೇಜು ಬಿಟ್ಟು ಕೇವಲ ಖಾಸಗಿ ಕಾಲೇಜಿನಲ್ಲಿ ಕ್ಯಾಂಪಸ್  selection ಗೆ ಮುಂದಾಗುತ್ತಿರುವುದು ವಿಪರ್ಯಾಸ ಎಂದು ಆಮ ಆದ್ಮಿ ಪಕ್ಷ ಸರ್ಕಾರ ಕ್ಕೆ ಒತ್ತಾಯ ಮಾಡಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಎಎಪಿ ಕಾರ್ಯಕರ್ತರು ತಿಳಿಸಿದರು.ಬಹುತೇಕ ಕಂಪನಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸೆಲೆಕ್ಷನ್ ಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳನ್ನೇ ಆಶ್ರಯಿಸುತ್ತಿರುವುದು ದುಃಖಕರ ವಿಚಾರವಾಗಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳೂ ಪ್ರತಿಭಾನ್ವಿತರಾಗಿದ್ದಾರೆ. ಒಂದೇ ವಿಷಯವನ್ನು ಅಭ್ಯಾಸ ಮಾಡಿರುತ್ತಾರೆ. ಕಲಿಕೆಯ ಗುಣಮಟ್ಟವೂ ಒಂದೇ ಆಗಿರುತ್ತದೆ. ಎಲ್ಲ ವಿಚಾರಗಳಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಸರಿಸಮನಾಗಿದ್ದಾರೆ. ಆದರೂ ಕ್ಯಾಂಪಸ್ ಸೆಲೆಕ್ಷನ್ ಗೆ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಕಂಪನಿಗಳು ಮಣೆಹಾಕುತ್ತಿರುವುದು ನೋವಿನ ಸಂಗತಿಯಾಗಿದೆ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು.

ಕ್ಯಾಂಪಸ್ ಸೆಲೆಕ್ಷನ್ ಮಾಡುವ ಎಲ್ಲ ಕಂಪನಿಗಳು ಸರ್ಕಾರಿ ಕಾಲೇಜುಗಳನ್ನು ಪರಿಗಣಿಸಬೇಕು ಎಂಬುದು ಆಮ್ ಆದ್ಮಿ ಪಕ್ಷದ ಪ್ರಮುಖ ಒತ್ತಾಯವಾಗಿದೆ. ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕ್ಯಾಂಪಸ್ ಸೆಲೆಕ್ಷನ್ ಗೆ ಸಿದ್ಧಗೊಳಿಸುವುದು ಹಾಗೂ ಕಂಪನಿಗಳು ಖಾಸಗಿ ಕಾಲೇಜುಗಳಿಗೆ ನೀಡುವ ಮಾನ್ಯತೆಯಂತೆ ಸರ್ಕಾರಿ ಕಾಲೇಜುಗಳಿಗೂ ಸಮನಾಗಿ ಆದ್ಯತೆ ನೀಡುವಂತೆ ಆಯಾ ಜಿಲ್ಲಾಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದು ಪಕ್ಷ ಒತ್ತಾಯಿಸುತ್ತಿದೆ.

ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷವು ರಾಜ್ಯಾದ್ಯಂತ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಪರವಾಗಿ ಅಭಿಯಾನವನ್ನು ಹಮ್ಮಿಕೊಂಡಿದೆ. ಡಿಸೆಂಬರ್ 1ರಿಂದ 4ರವರೆಗೆ ಆಮ್ ಆದ್ಮಿ ಪಕ್ಷದ ಯುವ ಘಟಕ ರಾಜ್ಯಾದ್ಯಂತ 4 ದಿನಗಳ ಅಭಿಯಾನವನ್ನು ಹಮ್ಮಿಕೊಂಡಿದೆ. ಪ್ರಮಖವಾಗಿ ಡಿ.1ರಂದು ರಾಮನಗರ, ಡಿ.2ರಂದು ಮಂಡ್ಯ, ಡಿ.3ರಂದು ಮೈಸೂರು ಹಾಗೂ ಡಿ.4ರಂದು ಚಾಮರಾಜನಗರದಲ್ಲಿ ಅಭಿಯಾನವನ್ನು ನಡೆಸಲಿದೆ. ಉಳಿದಂತೆ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾ ಮಟ್ಟದ ಅಭಿಯಾನಗಳನ್ನು ನಡೆಸಲಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳ ಗಮನವನ್ನು ಸೆಳೆದು, ಸರ್ಕಾರಿ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಆಯ್ಕೆಗೆ ಪರಿಗಣಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳವಂತೆ ಒತ್ತಡ ಹೇರಲಾಗುವುದು ಎಂದು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ. ಹನುಮಾಪುರ ಮಾಹಿತಿ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನಗ್ರಾಮ ಸಹಾಯಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯ