Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸೋಲು ಗೆಲುವಿನ ಮೆಟ್ಟಿಲು : ನಿಸರ್ಗ ನಾರಾಯಣಸ್ವಾಮಿ ವಿಶ್ವಾಸ

ಸುದ್ದಿಮೂಲ ವಾರ್ತೆ

ದೇವನಹಳ್ಳಿ,ಜೂ.23 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕಳೆದ ಐದು ವರ್ಷಗಳ ಕಾಲ ತಾಲೂಕಿನ ಮೂಲಭೂತ ಸೌಲಭ್ಯ ಕಲ್ಪಸಿದ್ದೇನೆ. ಆದರೂ ಕೇಲವೇ ಮತಗಳ ಅಂತರದಿಂದ ಸೋತಿದ್ದು, ಈ ಸೋಲು ಮುಂದಿನ ಗೆಲುವಿಗೆ ಹಾದಿ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ವಿಶ್ವಾಸವ್ಯಕ್ತಪಡಿಸಿದರು.

ಪಟ್ಟಣದ ತಮ್ಮ ಸ್ವ ಗೃಹದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಜನ್ಮ ದಿನಾಚರಣೆಯನ್ನು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರುಗಳು ಸರಳವಾಗಿ ಆಚರಣೆ ಮಾಡಿದ ಸಂದರ್ಭದಲ್ಲಿ ಮಾತನಾಡಿದರು.

ಕಳೆದ ಐದು ವರ್ಷಗಳ ಕಾಲ ಒಂದು ಉತ್ತಮ ಆಡಳಿತ ನಡೆಸಿದ್ದೇನೆ. ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದು, ಸರ್ಕಾರದ ಅನುದಾನದಡಿ ತಾಲ್ಲೂಕಿನಲ್ಲಿ ರಸ್ತೆ, ಚರಂಡಿ, ಬೀದಿ ದೀಪಗಳು ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜನರಿಗೆ ಅನುಕೂಲ ಕಲ್ಪಿಸಿದ್ದೇನೆ. ಆದರೂ 2023 ರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಮಾತ್ರ ಸೋತಿರುವೆ ಅಷ್ಟೇ ಈ ಸೋಲು ಮುಂದಿನ ಗೆಲುವಿಗೆ ಮೆಟ್ಟಿಲು ಎಂದು ತಿಳಿಸಿದರು.

ಚುನಾವಣೆಯಲ್ಲಿ ನನಗೆ ಮತಗಳನ್ನು ಹಾಕಿರುವ ಮತ ಬಾಂಧವರಿಗೆ ಹಾಗೂ ನಮ್ಮ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಮುಖಂಡರಿಗೆ ಅಭಿನಂದನೆ ಸಲ್ಲಿಸುವೆ. ಇಲ್ಲಿಗೆ ಬಂದು ನನ್ನ ಜನ್ಮ ದಿನಾಚರಣೆಯನ್ನು ಆಚರಣೆ ಮಾಡುತ್ತಿರುವ ನನ್ನ ಎಲ್ಲಾ ಸ್ನೇಹಿತರಿಗೆ ಕೃತಜ್ಞತೆಯನ್ನು ಸಲ್ಲಿಸುವೆ ಎಂದರು.

ಮುಂದಿನ ದಿನಗಳಲ್ಲಿ ಛಲ ಬಿಡದೆ ತಾಲ್ಲೂಕಿನಲ್ಲಿ ಮತ್ತಷ್ಟು ಪಕ್ಷ ಸಂಘಟನೆ ಮಾಡಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಜಯಗೊಳಿಸುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕಿನಾದ್ಯಂತ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಹುಟ್ಟು ಹಬ್ಬದಶುಭಾಶಯ ಕೋರಿದರು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ