ಬಾಗಲಕೋಟೆ: ಬಿ.ವಿ.ವಿ. ಸಂಘದ ಬಿವಿವಿಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ ಅಕ್ಟೋಬರ್ ೧೭ ಮತ್ತು ೧೮ರಂದು ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ’ಗ್ಲೋಬ್ ಇನ್ ಗ್ಲೋಬ್ಯೂಲ್ ೨.೦’ ಆಯೋಜಿಸಲಾಗಿದೆ.
ನಗರದ ನವನಗರದಲ್ಲಿರುವ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಶತಾಬ್ಧಿ ಸಭಾಭವನದಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.
ಕಡಿಮೆ ಅವಧಿಯಲ್ಲಿಯೇ ಪ್ರತಿಷ್ಠಿತ ಎ+ ಶ್ರೇಣಿ ಹಾಗೂ ಎನ್.ಎ.ಬಿ.ಎಚ್. ಮಾನ್ಯತೆ ಪಡೆದು, ದೇಶದ ಪ್ರಮುಖ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ಬಿವಿವಿಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯವು ಈ ಸಮ್ಮೇಳನದ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದೆ.
ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಹೋಮಿಯೋಪಥಿ ಸಂಶೋಧಕರಾದ ಮುಂಬೈನ ಡಾ. ಶ್ರೀಪಾದ ಕೇಡಕರ್ ಮತ್ತು ಡಾ. ಮಯೂರೇಶ ಮಹಾಜನ ಭಾಗವಹಿಸಲಿದ್ದಾರೆ. ಇವರು ಸಂಕೀರ್ಣ ಹಾಗೂ ಜೀವನಶೈಲಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳ ಕುರಿತು ವಿಶೇ? ಉಪನ್ಯಾಸ ನೀಡಲಿದ್ದಾರೆ.
ಈಗಾಗಲೇ ದೇಶದ ವಿವಿಧ ಭಾಗಗಳಿಂದ ೧೦೦೦ಕ್ಕೂ ಹೆಚ್ಚು ವೈದ್ಯರು, ಸಂಶೋಧಕರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಪ್ರತಿನಿಧಿಗಳಾಗಿ ನೋಂದಣಿ ಮಾಡಿಕೊಂಡಿದ್ದಾರೆ.
ಸಮ್ಮೇಳನವನ್ನು ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಡಾ. ರಮೇಶ ಜಿ.ಎಚ್. ಉದ್ಘಾಟಿಸಲಿದ್ದಾರೆ. ಬೀದರಿನ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಿ.ವಿ.ವಿ. ಸಂಘದ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಡಾ. ವೀರಣ್ಣ ಸಿ. ಚರಂತಿಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ, ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಹಾಗೂ ಬಿವಿವಿಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಎಸ್. ಸಾಸನೂರ ಉಪಸ್ಥಿತರಿರಲಿದ್ದಾರೆ.
ಈ ಕುರಿತು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಅರುಣ ಹೂಲಿ, ಡಾ. ರವಿ ಕೋಟೆಣ್ಣವರ ಹಾಗೂ ಡಾ. ಪ್ರದೀಪ ಕೆ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಟೋ ೦೪ ಬಿವಿವಿಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯ