ಬೆಳಗಾವಿ :
ಪ್ರಸಕ್ತ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಕೆಎಲ್ಇ ಸಂಸ್ಥೆಯ ಎಸ್ ಸಿ ಪಿ ಪ್ರೌಢಶಾಲೆ ವಿಜ್ಞಾನ ಶಿಕ್ಷಕಿ ಸಪ್ನಾ ಅನಿಗೋಳ ಪುರಸ್ಕೃತರಾಗಿದ್ದಾರೆ. ರಾಜ್ಯದಿಂದ ಆಯ್ಕೆಯಾದ ಇಬ್ಬರು ಶಿಕ್ಷಕರಲ್ಲಿ ಸಪ್ನಾ ಅನಿಗೋಳ ಅವರು ಒಬ್ಬರು. ಸಪ್ನಾ ಅನಿಗೋಳ ವಿಜ್ಞಾನದ ಕ್ರಿಯಾಶೀಲ ಶಿಕ್ಷಕರಾಗಿ ಕಳೆದ 20 ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿಜ್ಞಾನದ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ತರಬೇತುಗೊಳಿಸಿ ವಿದ್ಯಾರ್ಥಿಗಳ ಪ್ರಗತಿಗೆ ಶ್ರಮಿಸಿದ್ದಾರೆ. ಪ್ರಶಸ್ತಿಗೆ ಪುರಸ್ಕೃತರಾದ ಸಪ್ನಾ ಅವರಿಗೆ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಸಂಸ್ಥೆಗೆ ಕೀರ್ತಿ ಹಾಗೂ ಘನತೆ ತಂದ ಸಪ್ನಾ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಸಪ್ನಾ ಅನಿಗೋಳ ಅವರಿಗೆ ಸಪ್ಟೆಂಬರ್ 5ರಂದು ಶಿಕ್ಷಕ ದಿನಾಚರಣೆ ನಿಮಿತ್ತ ದೆಹಲಿಯಲ್ಲಿ ಜರುಗಲಿರುವ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.