LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಮತದಾರರ ದಿನಾಚರಣೆ-2025: ರಾಜ್ಯಪಾಲರಿಂದ ಪ್ರತಿಜ್ಞಾವಿಧಿ

ಬೆಂಗಳೂರು: ಭಾರತ ಚುನಾವಣಾ ಆಯೋಗ - ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ವತಿಯಿಂದ* ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ *"ರಾಷ್ಟ್ರೀಯ ಮತದಾರರ ದಿನಾಚರಣೆ-2025"* ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ *ಗೌರವಾನ್ವಿತ ರಾಜ್ಯಪಾಲರುಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್* ರವರು ಆಗಮಿಸಿ ಚಾಲನೆ ನೀಡಿದರು.

ಮೊದಲನೆ ಬಾರಿ ಮತದಾರರಿಗೆ ಗುರುತಿನ ಚೀಟಿ ವಿತರಣೆ:

ಮೊದಲನೆ ಬಾರಿ ಮತದಾನ ಮಾಡುವ ಯುವ ಮತದಾರರು, ವಿಕಲ ಚೇತನರು, ತೃತೀಯ ಲಿಂಗಿಗಳು ಹಾಗೂ ಬುಡಕಟ್ಟು ಜನಾಂಗದವರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಇದೇ ವೇಳೆ ಬ್ಯಾಡ್ಜ್ ವಿತರಿಸಲಾಯಿತು.

ಮತದನಾ ಪ್ರತಿಜ್ಞಾ ವಿಧಿ ಸ್ವೀಕಾರ:

ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸಭಾಂಗಣಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು, ವಿದ್ಯಾರ್ಥಿಗಳು ಸೇರಿದಂತೆ 1500ಕ್ಕೂ ಹೆಚ್ಚು ಮಂದಿ ಮತದನಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ರಾಜ್ಯಮಟ್ಟದ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ವಿತರಣೆ:

ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದಂತಹ ಅಧಿಕಾರಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಹಾಗೂ ಪಾರಿತೋಷಕವನ್ನು ವಿತರಿಸಲಾಯಿತು. (ಪಟ್ಟಿ ಲಗತ್ತಿಸಿದೆ)

ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿಯಾದ  ಮನೋಜ್ ಕುಮಾರ್ ಮೀನಾ, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯಾದ ಕುರುಮರಾವ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಸ್ವೀಪ್ ನೋಡಲ್ ಅಧಿಕಾರಿ ಪಿ.ಎನ್ ವಸ್ತ್ರದ್ ಸೇರಿದಂತೆ ಇನ್ನಿತರೆ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ