LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋ ನವೀನ’ ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ: ನವೀನ್ ಸಜ್ಜು

ಶಿವಮೊಗ್ಗ, ಮೇ .27 : ಕನ್ನಡ ಚಿತ್ರರಂಗದ ಗಾಯಕ ಹಾಗೂ ಸಂಗೀತ ನಿರ್ದೇಶಕ, ಬಿಗ್‌ಬಾಸ್ ಖ್ಯಾತಿಯ ನವೀನ್ ಸಜ್ಜು ಅಭಿನಯದ ‘ಲೋ ನವೀನ’ ಸಿನಿಮಾ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

ಚಿತ್ರದ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ತಂಡವು ಬುಧವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಮಾತನಾಡಿದ ನಟ ನವೀನ್ ಸಜ್ಜು, “ಮೇ 15ರಂದು ಬಿಡುಗಡೆಯಾದ ‘ಲೋ ನವೀನ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಚಾರ ಕಾರ್ಯದ ಭಾಗವಾಗಿ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಲಾಗುತ್ತಿದೆ,” ಎಂದರು.

ಗ್ರಾಮೀಣ ಹಿನ್ನೆಲೆಯ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಹಳ್ಳಿಯ ಜೀವನಶೈಲಿ, ಸ್ನೇಹ, ಪ್ರೀತಿ, ಕುಟುಂಬ ಮೌಲ್ಯಗಳು ಹಾಗೂ ಇಂದಿನ ಯುವಕರ ಬದುಕಿನ ವಿವಿಧ ಆಯಾಮಗಳನ್ನು ತೆರೆದಿಡುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಧನುರ್ಧಾರಿ ಪವನ್ ನಿರ್ದೇಶಿಸಿರುವ ಚಿತ್ರವನ್ನು ಕೀರ್ತಿಸ್ವಾಮಿ, ಬೆನ್ ಚಿಕ್ಕಸ್ವಾಮಿ ಹಾಗೂ ಎನ್‌.ಎಸ್‌. ಸ್ಟುಡಿಯೋಸ್ ನಿರ್ಮಿಸಿದೆ. ನವೀನ್ ಸಜ್ಜು ಅವರು ಅಭಿನಯದ ಜೊತೆಗೆ ಸಂಗೀತ ನಿರ್ದೇಶನವನ್ನೂ ನಿರ್ವಹಿಸಿದ್ದಾರೆ. ಸುನೀಲ್ ಮೈಸೂರು ಅವರೊಂದಿಗೆ ಸೇರಿ ಕಥೆ ಸಿದ್ಧಪಡಿಸಲಾಗಿದ್ದು, ಚಿತ್ರದಲ್ಲಿ ಒಟ್ಟು ಎಂಟು ಹಾಡುಗಳಿವೆ ಎಂದು ಮಾಹಿತಿ ನೀಡಿದರು.

ನಟಿ ವರ್ಷ ಗಿರಿಧರ್ ನಾಯಕಿಯಾಗಿ ಅಭಿನಯಿಸಿದ್ದು, ರೇಷ್ಮಾ ವಿ. ಗೌಡ, ಪ್ರಕಾಶ್ ತುಮ್ಮಿನಾಡು, ಅಪೂರ್ವಶ್ರೀ, ಅಭಿಜಿತ್ ಗೌಡ ಹಾಗೂ ಮಲ್ಲರಾಜು ಮಾರಸಿಂಗನಹಳ್ಳಿ ಸೇರಿದಂತೆ ಹಲವರು ನಟಿಸಿದ್ದಾರೆ.

ಚಿತ್ರದ ಶೀರ್ಷಿಕೆ ಕುರಿತು ಪ್ರತಿಕ್ರಿಯಿಸಿದ ನವೀನ್ ಸಜ್ಜು, ಆರಂಭದಲ್ಲಿ ಬೇರೆ ಹೆಸರನ್ನು ಪರಿಗಣಿಸಲಾಗಿತ್ತು. ಬಳಿಕ ‘ಲೋ ನವೀನ’ ಎಂಬ ಹೆಸರು ಕಥೆಗೆ ಹೆಚ್ಚು ಹೊಂದಿಕೆಯಾಗುತ್ತದೆ ಎನ್ನುವ ಕಾರಣಕ್ಕೆ ಅಂತಿಮಗೊಳಿಸಲಾಯಿತು ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST