Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

‘2028ರಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ’: ಬಿ.ವೈ. ವಿಜಯೇಂದ್ರ

ಲಿಂಗಸೂರು, ಸೆ 1 : (ಸಮದರ್ಶಿ ಸುದ್ದಿ) - 2028ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಿಂಗಸೂರಿನಿಂದ ಆರಂಭವಾಗಿರುವ ಬಿಜೆಪಿ ಪಾದಯಾತ್ರೆ ರಾಜ್ಯದ ರಾಜಕೀಯ ದಿಕ್ಕನ್ನು ಬದಲಿಸುವ ಜನಾಂದೋಲನವಾಗಲಿದೆ ಎಂದು ಅವರು ಹೇಳಿದ್ದಾರೆ.

ಲಿಂಗಸೂರಿನಿಂದ ಬಿಜೆಪಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ವಿಜಯೇಂದ್ರ, ಇದು ಕೇವಲ ರಾಜಕೀಯ ಕಾರ್ಯಕ್ರಮವಲ್ಲ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರೈತರು, ದಲಿತರು, ಬಡವರು, ಯುವಜನರು ಮತ್ತು ಮಹಿಳೆಯರ ವಿರೋಧಿ ಆಡಳಿತದ ವಿರುದ್ಧದ ಹೋರಾಟವಾಗಿದೆ ಎಂದರು.

“ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸುತ್ತಿದ್ದಾರೆ. ನಿಮ್ಮ ಸರ್ಕಾರದ ವೈಫಲ್ಯಗಳೇ ನಮ್ಮ ಪಾದಯಾತ್ರೆಗೆ ಕಾರಣ. ರಾಜ್ಯದ ಜನರ ಹಕ್ಕು, ನ್ಯಾಯ ಮತ್ತು ಭವಿಷ್ಯಕ್ಕಾಗಿ ನಾವು ಬೀದಿಗಿಳಿದಿದ್ದೇವೆ” ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿರುವುದು ಬಿಜೆಪಿ ಹೋರಾಟದ ಮೊದಲ ಹಂತದ ಜಯ ಎಂದು ವಿಜಯೇಂದ್ರ ಹೇಳಿದರು.

ದಲಿತರ ಅಭಿವೃದ್ಧಿಗೆ ಮೀಸಲಾದ ಸುಮಾರು 187 ಕೋಟಿ ರೂ. ಹಣದ ದುರುಪಯೋಗದ ಆರೋಪಕ್ಕೆ ಕಾಂಗ್ರೆಸ್ ಸರ್ಕಾರ ಉತ್ತರಿಸಬೇಕು. ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಳ ಹಣವನ್ನು ಬೇರೆಡೆ ವರ್ಗಾವಣೆ ಮಾಡಿರುವ ಆರೋಪಗಳಿಗೂ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ದಲಿತ ಸಮುದಾಯದ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ವಾಲ್ಮೀಕಿ ಸಮುದಾಯದ ಯುವಕನ ಹತ್ಯೆ ಸೇರಿದಂತೆ ಹಲವು ಘಟನೆಗಳಲ್ಲಿ ಸರ್ಕಾರ ಗಂಭೀರವಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿದ ಅವರು, ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಮಾನವೀಯ ನೆರವು ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದರೂ ಸರ್ಕಾರ ಸಮರ್ಪಕ ಕ್ರಮ ಕೈಗೊಂಡಿಲ್ಲ. ಸಾವಿರಾರು ರೈತ ಕುಟುಂಬಗಳು ಸಂಕಷ್ಟದಲ್ಲಿದ್ದು, ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಟೀಕಿಸಿದರು.

ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡಲಾಗುತ್ತಿಲ್ಲ. ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳ ಆರೋಪಗಳಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

‘ಬಿಜೆಪಿಯ ಆರನೇ ಗ್ಯಾರಂಟಿ ಎನ್‌ಡಿಎ ಸರ್ಕಾರ’

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿದೆ. ಆದರೆ ಬಿಜೆಪಿಯ ‘ಆರನೇ ಗ್ಯಾರಂಟಿ’ 2028ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಸರ್ಕಾರವನ್ನು ಅಧಿಕಾರಕ್ಕೆ ತರುವುದು ಎಂದು ವಿಜಯೇಂದ್ರ ಹೇಳಿದರು.

ಲಿಂಗಸೂರಿನಿಂದ ಆರಂಭವಾದ ಈ ಪಾದಯಾತ್ರೆ ಕರ್ನಾಟಕದ ರಾಜಕೀಯ ಬದಲಾವಣೆಗೆ ಮುನ್ನುಡಿಯಾಗಲಿದೆ. ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಅವರು ಘೋಷಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ