LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಕಾಪಾಡಲು ಅಗತ್ಯ ಕ್ರಮ

ಬೆಂಗಳೂರು :  ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ, ಔಷಧ ಆಡಳಿತವು ರಾಜ್ಯದಲ್ಲಿ ತಯಾರಾಗುವ ಮತ್ತು ಮಾರಾಟಕ್ಕಾಗಿ ಸರಬರಾಜಾಗುತ್ತಿರುವ ಗುಣಮಟ್ಟವಲ್ಲದ ಔಷಧಗಳ ಮತ್ತು ಕಾಂತಿವರ್ಧಕಗಳ ಮೇಲೆ ನಿಯಮಾನುಸಾರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಮತ್ತು ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಪರಿಣಾಮಕಾರಿ ಔಷಧಗಳನ್ನು ಸರ್ಕಾರ ನಿಗದಿ ಪಡಿಸಿದ ಬೆಲೆಗಳಲ್ಲಿ ಗ್ರಾಹಕರಿಗೆ ದೊರಕುವಂತೆ ಮಾಡುವುದೇ ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ.

ಅಂತೆಯೇ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ.

ಔಷಧ ಆಡಳಿತವು, ಏಪ್ರಿಲ್ 2025ರ ಮಾಹೆಯಲ್ಲಿ ಔಷಧ ಪರೀಕ್ಷಾ ಪ್ರಯೋಗಾಲಯ ಬೆಂಗಳೂರು, ಹುಬ್ಬಳ್ಳಿ, ಬಳ್ಳಾರಿಗಳಲ್ಲಿ ಒಟ್ಟು 1,353 ಔಷಧ ಮಾದರಿಗಳನ್ನು ವಿಶ್ಲೇಷಿಸಲಾಗಿದೆ. ಅವುಗಳಲ್ಲಿ 30 ಅನುತ್ತಮ ಗುಣಮಟ್ಟದದೆಂದು ಘೋಷಿಸಿರುತ್ತದೆ.

ಏಪ್ರಿಲ್ 2025ರ ಮಾಹೆಯಲ್ಲಿ ಅನುತ್ತಮ ಗುಣಮಟ್ಟದ ಔಷಧವೆಂದು ಘೋಷಿತವಾದ ಹಾಗೂ ಇತರ ಉಲ್ಲಂಘನೆಗಾಗಿ ವಿವಿಧ ತಯಾರಿಕ ಸಂಸ್ಥೆಗಳ ವಿರುದ್ಧ 37 ಪ್ರಕರಣಗಳಲ್ಲಿ ಮೊಕದ್ದಮೆ ಹೂಡಲು ಅನುಮತಿ ನೀಡಲಾಗಿದೆ. ಔಷಧ ಆಡಳಿತ ವಿಭಾಗದಲ್ಲಿ 26 ಸೇವೆಗಳನ್ನು ಸಕಾಲದಡಿಯಲ್ಲಿ ಒದಗಿಸಲಾಗುತ್ತಿದ್ದು ಏಪ್ರಿಲ್ ಮಾಹೆಯಲ್ಲಿ 903 ಅರ್ಜಿಗಳನ್ನು ಸ್ವೀಕರಿಸಿದ್ದು, ಹಿಂದಿನ ಬಾಕಿ ಅರ್ಜಿಗಳು ಸೇರಿ ಒಟ್ಟು 993 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿರುತ್ತದೆ.

ಔಷಧ ಆಡಳಿತದ ಅಮಲುಜಾರಿ ಅಧಿಕಾರಿಗಳು ಏಪ್ರಿಲ್ 2025ರ ಮಾಹೆಯಲ್ಲಿ ಒಟ್ಟು 1,340 ಔಷಧ ಮಾದರಿಗಳನ್ನು ವಿಶ್ಲೇಷಣೆಗೆ ಪಡೆದಿರುತ್ತಾರೆ. 2,229 ಔಷಧ ಮಳಿಗೆಗಳನ್ನು ಪರಿವೀಕ್ಷಣೆ ಕೈಗೊಂಡಿರುತ್ತಾರೆ. ಅವುಗಳಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಒಟ್ಟು 128 ಸಂಸ್ಥೆಗಳ ಪರವಾನಿಗೆಗಳನ್ನು ಅಮಾನತ್ತುಗೊಳಿಸಲಾಗಿದೆ ಹಾಗೂ 07 ಪರವಾನಿಗೆಗಳನ್ನು ರದ್ದುಗೊಳಿಸಲಾಗಿದೆ.

ರಾಜ್ಯದಲ್ಲಿ ಎನ್.ಎಸ್.ಕ್ಯೂ ಬಂದಂತಹ ಪ್ರಕರಣಗಳಲ್ಲಿ ಏಪ್ರಿಲ್-2025ರ ಮಾಹೆಯಲ್ಲಿ ಸುಮಾರು ರೂ 11.5 ಲಕ್ಷ ಮೌಲ್ಯದ ಅನುತ್ತಮ ಗುಣಮಟ್ಟದ ಔಷಧಗಳನ್ನು ಮಾರುಕಟ್ಟೆಯಿಂದ ಹಿಂಪಡೆದು ಜಪ್ತಿ ಮಾಡಲಾಗಿರುತ್ತದೆ ಬೆಂಗಳೂರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ