LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಲ್ತುಳಿತ ತಡೆಗೆ ಹೊಸ ಕಾನೂನು- 3 ವರ್ಷ ಜೈಲು, 5 ಲಕ್ಷ ದಂಡ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ನಂತರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಹೊಸ ಕಾನೂನು ತರಲು ಹೊರಟಿದೆ.ಸಚಿವ ಸಂಪುಟ ಸಭೆಯಲ್ಲಿ ಜನಸಂದಣಿ ನಿಯಂತ್ರಣ ಮಸೂದೆ ಮಂಡಿಸಿದ್ದು ಮುಂದಿನ ಕ್ಯಾಬಿನೆಟ್‌ನಲ್ಲಿ ವಿಸ್ತಾರವಾಗಿ ಚರ್ಚೆ ನಡೆಸಲಿದೆ.

ಕ್ರೀಡೆ, ಸರ್ಕಸ್ ಇತರೇ ವಾಣಿಜ್ಯ ಉದ್ದೇಶದ ಕಾರ್ಯಕ್ರಮಗಳಿಗೆ ಸರ್ಕಾರ ಬಿಗಿ ನಿಯಮ ಜಾರಿಗೆ ಮುಂದಾಗಿದೆ. ಕಾರ್ಯಕ್ರಮಕ್ಕೂ ಮುನ್ನ ಅಥವಾ ಕಾರ್ಯಕ್ರಮ ನಡೆಯುವಾಗ ಜನರನ್ನು ನಿಯಂತ್ರಿಸಲಾಗದಿದ್ದರೆ ಆಯೋಜಕರಿಗೆ 3 ವರ್ಷದ ತನಕ ಜೈಲು, 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ.ಕಾರ್ಯಕ್ರಮದ ಆಯೋಜಕರು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮತಿಗೆ ಅರ್ಜಿ ಹಾಕಬೇಕು.

ಜಾತ್ರೆ, ರಥೋತ್ಸವ, ಪಲ್ಲಕ್ಕಿ ಉತ್ಸವ, ತೆಪ್ಪದ ತೇರು, ಉರುಸ್ ಅಥವಾ ಯಾವುದೇ ಧರ್ಮ, ಜಾತಿ ಅಥವಾ ಪಂಥಕ್ಕೆ ಸಂಬಂಧಿಸಿದ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಕಾನೂನು ಅನ್ವಯ ಆಗುವುದಿಲ್ಲ.ಕ್ರೀಡೆ, ಸರ್ಕಸ್, ಪ್ರಾಯೋಜಿತ ಕಾರ್ಯಕ್ರಮಗಳು, ರಾಜಕೀಯ ರ್‍ಯಾಲಿ ಸೇರಿದಂತೆ ಇತರೇ ವಾಣಿಜ್ಯ ಉದ್ದೇಶದ ಕಾರ್ಯಕ್ರಮಗಳು ಈ ಮಸೂದೆ ವ್ಯಾಪ್ತಿಯಲ್ಲಿ ಬರುತ್ತದೆ. ಕಾರ್ಯಕ್ರಮಗಳಲ್ಲಿ ಗಲಾಟೆ, ಅಹಿತಕರ ಘಟನೆ, ದೇಹ ಹಾನಿ, ಸಾವು ನೋವಿಗೆ ಕಾರ್ಯಕ್ರಮ ಆಯೋಜಕರೇ ಜವಾಬ್ದಾರಿಯಾಗುತ್ತಾರೆ.

ಗಾಯಾಳುಗಳಿಗೆ, ಮೃತ ಕುಟುಂಬಗಳಿಗೆ ಪರಿಹಾರ ನೀಡದಿದ್ದರೆ ಕಾರ್ಯಕ್ರಮ ಆಯೋಜಕರ ಆಸ್ತಿ ಹರಾಜು ಮೂಲಕ ಪರಿಹಾರ ವಸೂಲಿ ಮಾಡಲಾಗುತ್ತದೆ.ಶಾಂತಿ ಭಂಗ ತರುವ ಮುನ್ಸೂಚನೆ ಇದ್ದರೆ, ಗಲಾಟೆ, ಅಹಿತಕರ ಘಟನೆ ನಡೆದರೆ ಅನುಮತಿ ಇದ್ದರೂ ಅಹಿತಕರ ಘಟನೆ ನಡೆದರೆ ಕಾರ್ಯಕ್ರಮ ನಿಷೇಧಿಸುವ ಅಧಿಕಾರವನ್ನು ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026