ಬೆಳಗಾವಿಗೆ ನೂತನ ಎಸ್ಪಿ
ಬೆಳಗಾವಿಗೆ ನೂತನ ಎಸ್ಪಿ
ಬೆಳಗಾವಿ :
ಬೆಳಗಾವಿಗೆ ನೂತನ SPಯನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಡಾ.ಭೀಮಶಂಕರ್ ಗುಳೇದ ಅವರನ್ನು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದ್ದು ಅವರು ಕರ್ನಾಟಕದ 2012ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಬೆಳಗಾವಿ ರಾಜ್ಯದಲ್ಲಿ ಅತ್ಯಂತ ದೊಡ್ಡ ಜಿಲ್ಲೆಯಾಗಿದೆ. ಹೀಗಾಗಿ ಇಡೀ ಜಿಲ್ಲೆಯ ಹೊಣೆಗಾರಿಕೆಯನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸಬೇಕಾದ ಹೊಣೆಗಾರಿಕೆ ನೂತನ ಎಸ್‌ಪಿ ಮೇಲಿದೆ. ಈ ಹಿನ್ನಲೆಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಧಿಕಾರಿ ಮೇಲೆ ಜನರ ಗಮನ ಹೆಚ್ಚು ಕೇಂದ್ರೀಕೃತಗೊಂಡಿದೆ.
ಇದುವರೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿಯಾಗಿದ್ದ ಸಂಜೀವ ಪಾಟೀಲ ಅವರನ್ನು ರಾಜ್ಯ ಸರ್ಕಾರ ಬೆಂಗಳೂರು ಮಹಾನಗರದ ಉಪ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.