Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಟಿಸಿಎಸ್ ಮತಾಂತರ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿದಾ ಖಾನ್ ಬಂಧನ

ಮುಂಬೈ, ಮೇ 7: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ಮಹಾರಾಷ್ಟ್ರದ ನಾಸಿಕ್ ಘಟಕದಲ್ಲಿ ನಡೆದಿರುವ ಮತಾಂತರ ಹಾಗೂ ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಅನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ದೇಶಾದ್ಯಂತ ಚರ್ಚೆಗೆ ಕಾರಣವಾದ ಈ ಪ್ರಕರಣದಲ್ಲಿ ನಿದಾ ಖಾನ್ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಇದೀಗ ಆಕೆಯನ್ನು ಛತ್ರಪತಿ ಸಂಭಾಜಿನಗರದಲ್ಲಿ ಜಂಟಿ ಪೊಲೀಸ್ ಕಾರ್ಯಾಚರಣೆಯ ಮೂಲಕ ವಶಕ್ಕೆ ಪಡೆಯಲಾಗಿದೆ.

ನಾಸಿಕ್ ಟಿಸಿಎಸ್ ಘಟಕದಲ್ಲಿ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನಿಸಿದ್ದಾಳೆ ಎಂಬ ಗಂಭೀರ ಆರೋಪ ನಿದಾ ಖಾನ್ ವಿರುದ್ಧ ಕೇಳಿಬಂದಿದೆ. ತಲೆಮರೆಸಿಕೊಂಡಿದ್ದ ಆಕೆ ಛತ್ರಪತಿ ಸಂಭಾಜಿನಗರದ ಫ್ಲಾಟ್‌ನಲ್ಲಿ ಪತ್ತೆಯಾಗಿದ್ದು, ಅಲ್ಲಿಯೇ ಪೊಲೀಸರು ಬಂಧಿಸಿದ್ದಾರೆ. ಗರ್ಭಿಣಿ ಎಂದು ಹೇಳಿಕೊಂಡು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರೂ ನ್ಯಾಯಾಲಯದಿಂದ ಮಧ್ಯಂತರ ರಕ್ಷಣೆ ನೀಡಲಾಗಿಲ್ಲ.

ನಾಸಿಕ್ ಎಸ್‌ಐಟಿ, ಛತ್ರಪತಿ ಸಂಭಾಜಿನಗರ ಪೊಲೀಸ್ ಕಮಿಷನರೇಟ್ ಹಾಗೂ ಅಪರಾಧ ವಿಭಾಗದ ಪೊಲೀಸರು ಸೇರಿ ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಾರೇಗಾಂವ್ ಪ್ರದೇಶದ ಕೈಸರ್ ಕಾಲೋನಿಯ ಫ್ಲಾಟ್‌ನಲ್ಲಿ ನಿದಾ ಖಾನ್ ತನ್ನ ಕುಟುಂಬ ಸದಸ್ಯರೊಂದಿಗೆ ತಂಗಿದ್ದಳು ಎಂದು ತಿಳಿದುಬಂದಿದೆ. ಪೊಲೀಸರು ಈ ಸ್ಥಳವನ್ನು ಎರಡು ದಿನಗಳ ಕಾಲ ನಿಗಾ ವಹಿಸಿ ಬಳಿಕ ದಾಳಿ ನಡೆಸಿದ್ದಾರೆ. ಬಂಧನದ ನಂತರ ಆಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ನಾಸಿಕ್‌ಗೆ ಕರೆದೊಯ್ಯಲಾಗಿದೆ.

ನಿದಾ ಖಾನ್ ತಾನು ಎರಡು ತಿಂಗಳ ಗರ್ಭಿಣಿ ಎಂದು ಹೇಳಿಕೊಂಡು ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನು ಕೋರಿದ್ದಳು. ಆದರೆ ಪ್ರಕರಣದ ಗಂಭೀರತೆಯನ್ನು ಗಮನಿಸಿ ನಾಸಿಕ್ ನ್ಯಾಯಾಲಯವು ಆಕೆಯ ಮನವಿಯನ್ನು ತಿರಸ್ಕರಿಸಿದೆ. ಇದರಿಂದಾಗಿ ಆಕೆಯ ಬಂಧನಕ್ಕೆ ದಾರಿ ಸುಗಮವಾಗಿದೆ.

ನಿದಾ ಖಾನ್ 2021ರ ಡಿಸೆಂಬರ್‌ನಲ್ಲಿ ಟಿಸಿಎಸ್‌ನಲ್ಲಿ ‘ಪ್ರೊಸೆಸ್ ಅಸೋಸಿಯೇಟ್’ ಆಗಿ ಸೇರಿದ್ದಳು. ಪ್ರಕರಣ ಬೆಳಕಿಗೆ ಬಂದ ನಂತರ ಏಪ್ರಿಲ್ 9 ರಂದು ಸಂಸ್ಥೆಯು ಆಕೆಯನ್ನು ಅಮಾನತುಗೊಳಿಸಿದೆ. ಆಕೆಯ ಸಿಸ್ಟಮ್ ಮತ್ತು ನೆಟ್‌ವರ್ಕ್ ಪ್ರವೇಶವನ್ನು ಕೂಡ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ವಿವಾದ ಬಹಿರಂಗವಾಗುವ ಮೊದಲು ಆಕೆಯನ್ನು ನಾಸಿಕ್‌ನಿಂದ ಮುಂಬೈನ ಮಲಾಡ್ ಹಾಗೂ ಹಿರಾನಂದಾನಿ ಕಚೇರಿಗಳಿಗೆ ವರ್ಗಾಯಿಸಲಾಗಿತ್ತು ಎಂದು ವರದಿಯಾಗಿದೆ.

ಈ ಪ್ರಕರಣ ನಾಸಿಕ್ ಟಿಸಿಎಸ್ ಘಟಕದ ಮಹಿಳಾ ಉದ್ಯೋಗಿಯೊಬ್ಬರ ದೂರಿನಿಂದ ಬೆಳಕಿಗೆ ಬಂದಿದೆ. ಸಹೋದ್ಯೋಗಿ ದಾನಿಶ್ ಶೇಖ್ ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನಂತರ ಆತ ಈಗಾಗಲೇ ವಿವಾಹಿತನಾಗಿದ್ದ ಎಂಬುದು ಬಹಿರಂಗವಾಗಿದೆ. ದಾನಿಶ್ ಶೇಖ್‌ನ ಸಹೋದರಿಯಾಗಿರುವ ನಿದಾ ಖಾನ್, ದೂರುದಾರ ಮಹಿಳೆಯ ಮೇಲೆ ಧರ್ಮ ಸಂಬಂಧಿತ ಅವಹೇಳನಕಾರಿ ಮಾತುಗಳನ್ನು ಆಡಿದ್ದು, ಮತಾಂತರಕ್ಕೆ ಒತ್ತಾಯಿಸಿದ್ದಾಳೆ ಎಂಬ ಆರೋಪವೂ ಇದೆ.

ತನಿಖೆ ಮುಂದುವರಿದಂತೆ ಇತರ ಮಹಿಳಾ ಉದ್ಯೋಗಿಗಳೂ ಮುಂದೆ ಬಂದು ಹಿರಿಯ ಸಿಬ್ಬಂದಿ ವಿರುದ್ಧ ಮಾನಸಿಕ ಹಾಗೂ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ. ಈ ಬಗ್ಗೆ HR ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ HR ಮುಖ್ಯಸ್ಥೆ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಮಧ್ಯೆ ಟಿಸಿಎಸ್ ಸಂಸ್ಥೆ ಸ್ಪಷ್ಟನೆ ನೀಡಿದ್ದು, ನಿದಾ ಖಾನ್ HR ಮ್ಯಾನೇಜರ್ ಆಗಿರಲಿಲ್ಲ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಆಕೆಗೆ ಯಾವುದೇ ಪಾತ್ರವಿರಲಿಲ್ಲ ಎಂದು ತಿಳಿಸಿದೆ. ಜೊತೆಗೆ ಆಂತರಿಕ ದೂರುಗಳೂ ಈ ಬಗ್ಗೆ ಬಂದಿರಲಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ