LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚನ್ನಪಟ್ಟಣದಲ್ಲಿ ಗೆಲುವು ಯಾರಿಗೆ?.. ನಾಮಫಲಕ ರೆಡಿ ಮಾಡಿಸಿದ ನಿಖಿಲ್ ಅಭಿಮಾನಿಗಳು!

ಇಂದು ಚೆನ್ನಪಟ್ಟಣ ಫಲಿತಾಂಶ ಪ್ರಕಟವಾಗಲಿದೆ. ಆದರೆ ಅದಕ್ಕೂ ಮೊದಲೇ ನಿಖಿಲ್ ಎಂಎಲ್ಎ ಎಂಬ ನಾಮಫಲಕವನ್ನು  ಅಭಿಮಾನಿಗಳು ರೆಡಿ ಮಾಡಿದ್ದಾರೆ.

ಚನ್ನಪಟ್ಟಣದಲ್ಲಿ ಪ್ರತಿಸ್ಪರ್ಧಿಯಾಗಿರುವ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ಹಾಗೂ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಇಬ್ಬರೂ ತಲಾ ಎರಡು ಬಾರಿ ಸೋತಿದ್ದಾರೆ. ಇದೇ ಕ್ಷೇತ್ರದಲ್ಲಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ ಎರಡು ಬಾರಿ ಸೋತಿದ್ದರು. ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಹಾಗಾಗಿ ಈ ಚುನಾವಣೆಯಲ್ಲಿ ಯಾರು ಸೋತರು ಹ್ಯಾಟ್ರಿಕ್ ಸಾಧನೆ ಆಗಲಿದೆ.

ಈ ಹಿಂದೆ ಮಂಡ್ಯ, ರಾಮನಗರದಲ್ಲಿ ಸೋತು‌ ಕಾರ್ಯಕರ್ತರಿಗೆ ನೋವು ಉಂಟಾಗಿತ್ತು. ಆದ್ರೆ ಈ ಬಾರಿ ತಮ್ಮ ಯುವ ನಾಯಕ ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ತಾರೆ ಎಂಬ ವಿಶ್ವಾಸದಲ್ಲಿ ಅಭಿಮಾನಿಗಳು ಇದ್ದಾರೆ. ಅದೇ ವಿಶ್ವಾಸದಲ್ಲಿ ಕೆಲ ಅಭಿಮಾನಿಗಳು ಶ್ರೀಯುತ ನಿಖಿಲ್ ಕುಮಾರಸ್ವಾಮಿ, ಶಾಸಕರು, ಚನ್ನಪಟ್ಟಣ ಎಂದು ಕಚೇರಿಗೆ ನಾಮಫಲಕವನ್ನು ರೆಡಿ ಮಾಡಿದ್ದಾರೆ.

ಮಂಡ್ಯದಲ್ಲೂ ಅಭಿಮಾನಿಗಳು ನಿಖಿಲ್ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಶ್ರೀರಂಗಪಟ್ಟದಲ್ಲಿರುವ ಶಕ್ತಿ ದೇವತೆ ಆರತಿ ಉಕ್ಕಡದ ಅಹಲ್ಯದೇವಿಗೆ ಕಾರ್ಯಕರ್ತ ಪ್ರವೀಣ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ ಮೈತ್ರಿ ಅಭ್ಯರ್ಥಿ ನಿಖಿಲ್ ಗೆಲ್ಲಲಿ ಎಂದು ಮೇಕೆ ಬಲಿಕೊಟ್ಟು ಹರಕೆ ಹೊತ್ತಿದ್ದಾರೆ.ಇಂದು ಮತದಾರ ಬರೆದಿರುವ ನಿರ್ಧಾರ ಹೊರ ಬೀಳಲಿದ್ದು, ಚನ್ನಪಟ್ಟಣದ ಅಧಿಪತಿ ಯಾರಾಗ್ತಾರೆ ಅನ್ನೋ ಕುತೂಹಲ ಗರಿಗೆದರಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025ವಚನ: -ಘಟ್ಟಿವಾಳಯ್ಯ .!ಧರ್ಮಸ್ಥಳದಲ್ಲಿ ಹೊಡೆದಾಟ : ನೇತ್ರಾವತಿ ಪಾಂಗಾಳ ಸಮೀಪ ಯೂಟ್ಯೂಬರ್ಸ್ ಮೇಲೆ ಹಲ್ಲೆ