LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೊಬೈಲ್ ಅಡಿಕ್ಷನ್‌ನಿಂದ ಮಕ್ಕಳನ್ನು ಕಾಪಾಡಲು ನಿಮ್ಹಾನ್ಸ್‌ನ ಹೊಸ ಯೋಜನೆ

ಬೆಂಗಳೂರು: ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್, ಟ್ಯಾಬ್‌ಲೆಟ್ ಮತ್ತು ಟಿವಿಗಳಿಗೆ ಅತಿಯಾಗಿ ಅಡಿಕ್ಟ್ ಆಗುತ್ತಿರುವುದು ಪೋಷಕರಿಗೆ ಗಂಭೀರ ಚಿಂತೆಯ ವಿಷಯವಾಗಿದೆ. ದೀರ್ಘಕಾಲ ಸ್ಕ್ರೀನ್ ನೋಡುವುದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮಗಳು ಉಂಟಾಗುತ್ತಿವೆ. ಇದನ್ನು ತಡೆಗಟ್ಟಲು ನಿಮ್ಹಾನ್ಸ್ (NIMHANS) ಸಂಸ್ಥೆ ಪೋಷಕರಿಗೆ ವಿಶೇಷ ಮಾರ್ಗದರ್ಶನ ನೀಡಲು ಮುಂದಾಗಿದೆ.

ನಿಮ್ಹಾನ್ಸ್‌ನ SHUT ಕ್ಲಿನಿಕ್ (ಸಸ್ಟೆನಬಲ್ ಹೆಲ್ತ್ ಯೂಸ್ ಆಫ್ ಟೆಕ್ನಾಲಜಿ) ಮತ್ತು ಯೋಗಕ್ಷೇಮ ಕೇಂದ್ರ (NCWB) ಜಂಟಿಯಾಗಿ ಪೋಷಕರಿಗಾಗಿ ಉಚಿತ ಆನ್‌ಲೈನ್ ತರಬೇತಿ ನೀಡಲಿದೆ. ಈ ಕಾರ್ಯಕ್ರಮದಲ್ಲಿ ಮಕ್ಕಳ ಸ್ಕ್ರೀನ್ ಟೈಮ್ ಕಡಿಮೆ ಮಾಡುವುದು, ಅವರಲ್ಲಿ ಸಕಾರಾತ್ಮಕ ವರ್ತನೆ ಬೆಳೆಸುವುದು ಹಾಗೂ ಪೋಷಕ-ಮಕ್ಕಳ ಸಂಬಂಧವನ್ನು ಬಲಪಡಿಸುವ ವಿಧಾನಗಳ ಬಗ್ಗೆ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ.
ಹೇಗೆ ನೋಂದಾಯಿಸಿಕೊಳ್ಳಬೇಕು?

ಈ ತರಬೇತಿಯಲ್ಲಿ ಭಾಗವಹಿಸಲು ಬಯಸುವ ಪೋಷಕರು NIMHANS Parent Group Registration Form ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ನೋಂದಾಯಿಸಿದವರಿಗೆ ದೇಶದ ಪ್ರಮುಖ ಮಾನಸಿಕ ಆರೋಗ್ಯ ತಜ್ಞರಿಂದ ಸಲಹೆ ಮತ್ತು ತರಬೇತಿ ಲಭಿಸಲಿದೆ.

ನಿಮ್ಹಾನ್ಸ್ ಅಧಿಕಾರಿಗಳು, “ಸ್ಕ್ರೀನ್ ಅಡಿಕ್ಷನ್ ಕೇವಲ ಮಕ್ಕಳ ಸಮಸ್ಯೆಯಲ್ಲ, ಇದು ಇಡೀ ಕುಟುಂಬದ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಪೋಷಕರಿಗೆ ಸರಿಯಾದ ಮಾರ್ಗದರ್ಶನ ನೀಡುವುದು ಅಗತ್ಯ” ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಮೂಲಕ ಮಕ್ಕಳು ಮತ್ತು ಪೋಷಕರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ನಿಮ್ಹಾನ್ಸ್ ನಿರ್ಧರಿಸಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026