LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ ಮಾಹೆಗೆ ಪಡಿತರ ಧಾನ್ಯ ವಿತರಣೆ: ಜಿಲ್ಲಾಧಿಕಾರಿ ನಿತೀಶ್ ಕೆ.


ರಾಯಚೂರು ಜುಲೈ 02 : ಇಲ್ಲಿಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜುಲೈ 2025 ರ ಮಾಹೆಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ಉಚಿತವಾಗಿ ಪಡಿತರ ಚೀಟಿಯ ಫಲಾನುಭವಿಗೆ ಪಡಿತರ ಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಕೇಂದ್ರ ವ್ಯಾಪ್ತಿಯ ಪ್ರತಿ ಅಂತ್ಯೋದಯ (ಎಎವೈ) ಪಡಿತರ ಚೀಟಿಗೆ 21 ಕೆ.ಜಿ ಜೋಳ ಮತ್ತು 14 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ ಕೇಂದ್ರ ವ್ಯಾಪ್ತಿಯ ಪಿ.ಹೆಚ್.ಹೆಚ್ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 03 ಕೆ.ಜಿ ಜೋಳ ಮತ್ತು 02 ಕೆ.ಜಿ ಸಾರವರ್ಧಿತ ಅಕ್ಕಿ ಇದರ ಜೊತೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಏಕ-ಸದಸ್ಯ, ದ್ವಿ-ಸದಸ್ಯ ಮತ್ತು ತ್ರಿ-ಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕಿಂತ ಹೆಚ್ಚಿನ ಸದಸ್ಯರುಳ್ಳ ಕೇಂದ್ರ ಹಾಗೂ ರಾಜ್ಯ ವ್ಯಾಪ್ತಿಯ ಅಂತ್ಯೋದಯ (ಎಎವೈ) ಮತ್ತು ಪಿ.ಹೆಚ್.ಹೆಚ್ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 05 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು.
ಒಂದು ರಾಷ್ಟç ಒಂದು ಪಡಿತರ ಚೀಟಿ (ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಚೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಚೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.
ಈ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬAದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಈ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾವುದೆಂದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು