Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಿತೀಶ್ ಕುಮಾರ್ ರಾಜೀನಾಮೆ : ಇಂದೇ ಬಿಜೆಪಿ ನಾಯಕನಿಗೆ ಬಿಹಾರ ಸಿಎಂ ಪಟ್ಟ

ಪಟ್ನಾ: ಬಿಹಾರದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಮಂಗಳವಾರ (ಏ.14) ತೆರೆ ಬಿಳಲಿದೆ. ಇದರ ಮಧ್ಯೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಏ.14ರಂದು ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿರುವ ಹಿನ್ನೆಲೆ, ಬಿಜೆಪಿಯ ಮೊದಲ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಗಟ್ಟಿಯಾಗಿದೆ. ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಸಾಮ್ರಾಟ್ ಚೌಧರಿ ಅವರ ಹೆಸರು ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದೆ.

ಮಂಗಳವಾರ ಕೊನೆಯ ಸಚಿವ ಸಂಪುಟ ಸಭೆಯನ್ನು ಕರೆದಿರುವ ನಿತೀಶ್ ಕುಮಾರ್, ಬಳಿಕ ರಾಜ್ಯಪಾಲ, ನಿವೃತ್ತ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹಸ್ನೈನ್ ಅವರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಇದರಿಂದಾಗಿ, ಬಿಜೆಪಿ ನಾಯಕರೊಬ್ಬರು ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.

ಮುಖ್ಯಮಂತ್ರಿ ಸ್ಥಾನ: ಇಂದು ಘೋಷಣೆ ಸಾಧ್ಯತೆ
243 ಸದಸ್ಯ ಬಲದ ವಿಧಾನಸಭೆಯಲ್ಲಿ 89 ಶಾಸಕರನ್ನು ಹೊಂದಿರುವ ಬಿಜೆಪಿ, ಅತಿ ದೊಡ್ಡ ಪಕ್ಷವಾಗಿದೆ. 2005ರಿಂದ ನಿತೀಶ್ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನದಲ್ಲಿದ್ದ ಬಿಜೆಪಿ, ಇದೀಗ ಮೊದಲ ಬಾರಿಗೆ ಮುಖ್ಯಮಂತ್ರಿಯ ಹುದ್ದೆಯನ್ನು ಪಡೆಯಲಿರುವುದು ವಿಶೇಷ.

2025ರ ಚುನಾವಣೆಯಲ್ಲಿ 243 ಸದಸ್ಯರ 89 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಬಿಹಾರ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ನಿತೀಶ್ ಕುಮಾರ್‌ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಹೊಂದಿದ್ದ ಬಿಜೆಪಿ, ರಾಜ್ಯದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯ ಹುದ್ದೆಯನ್ನು ಪಡೆಯುತ್ತಿರುವುದು ವಿಶೇಷ.

2005ರಿಂದ ನಿತೀಶ್ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನದಲ್ಲಿದ್ದ ಬಿಜೆಪಿ, ಇದೀಗ ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಭರ್ತಿ ಮಾಡುತ್ತಿರುವುದು ವಿಶೇಷ.

ಹೊಸ ನಾಯಕನ ಆಯ್ಕೆಗೆ ಬಿಜೆಪಿ ಉನ್ನತ ನಾಯಕತ್ವವು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ವೀಕ್ಷಕರಾಗಿ ನೇಮಕ ಮಾಡಿದೆ. ಏಪ್ರಿಲ್ 14ರಂದು ನಡೆಯಲಿರುವ ಬಿಜೆಪಿ ಶಾಸಕರ ಸಭೆಯಲ್ಲಿ ಅವರು ಭಾಗವಹಿಸಲಿದ್ದು, ಅದೇ ದಿನ ಎನ್‌ಡಿಎ ಶಾಸಕರ ಸಭೆಯೂ ನಡೆಯಲಿದೆ. ಬಿಹಾರದಲ್ಲಿ ಜೆಡಿಯು, ಬಿಜೆಪಿ, ಎಲ್‌ಜೆಪಿ, ಎಚ್‌ಎಎಂ ಹಾಗೂ ಉಪೇಂದ್ರ ಕುಶ್ವಾಹಾ ಅವರ ಆರ್‌ಎಲ್‌ಪಿ ಪಕ್ಷಗಳು ಎನ್‌ಡಿಎ ಮೈತ್ರಿಯ ಭಾಗವಾಗಿವೆ. ಮೈತ್ರಿಕೂಟದಲ್ಲಿ ಯಾವುದೇ ಬದಲಾವಣೆ ಇಲ್ಲ. ಜೆಡಿಯು ನಾಯಕ ನಿತೀಶ್‌ ಅವರ ಬದಲು, ಬಿಜೆಪಿಯ ನಾಯಕ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ರಾಜಕೀಯ ಜೀವನವನ್ನು ಆರ್‌ಜೆಡಿಯಲ್ಲಿ ಆರಂಭಿಸಿ ಬಳಿಕ ಜೆಡಿಯು ಹಾಗೂ ನಂತರ ಬಿಜೆಪಿಗೆ ಸೇರ್ಪಡೆಯಾದ ಸಾಮ್ರಾಟ್ ಚೌಧರಿ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೂ ಹಾಗೂ ಉಪಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಅವರು ಗೃಹ ಖಾತೆಯನ್ನೂ ನಿರ್ವಹಿಸುತ್ತಿದ್ದಾರೆ.

ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಜರಾಗುವ ಸಾಧ್ಯತೆ ಇದೆ. ಪಟ್ನಾದ ಲೋಕಭವನದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಲಾಗಿದೆ ಎಂದು ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ