LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಯಾರಿಂದಲೂ ಸಾಧ್ಯವಿಲ್ಲ

ಬೆಂಗಳೂರು: ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಕೊಲ್ಲಲು ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುತಾತ್ಮರ ದಿನಾಚರಣೆ ಅಂಗವಾಗಿ ವಿಧಾನಸೌಧದ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜನವರಿ 30, 1948 ರಂದು ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು. ಅವರ ಹೋರಾಟಡ ಬದುಕು, ಅಹಿಂಸೆ, ಸತ್ಯಾಗ್ರಹ, ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗೃಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ದೇಶದಲ್ಲಿ ಬಹಳ ದೀರ್ಘ ಕಾಲ ನಡೆದ ಹೋರಾಟದ ನಾಯಕತ್ವವನ್ನು ಗಾಂಧೀಜಿ ವಹಿಸಿದ್ದರು. 1915 ರಲ್ಲಿ ದಕ್ಷಿಣ ಆಫ್ರಿಕಾ ದಿಂದ ಭಾರತಕ್ಕೆ ಬಂದು ಮೊದಲು ದೇಶ, ದೇಶದ ಜನ, ಸಮಾಜ, ಬದುಕನ್ನು ಅರ್ಥಆಡಿಕೊಳ್ಳುವ ಪ್ರಯತ್ನ ಮಾಡಿ, ನಂತರ ಹೋರಾಟವನ್ನು ಪ್ರಾರಂಭಿಸಿದರು. ಸತ್ಯ ಅಹಿಂಸೆಗಳಿಂದ ಕೂಡಿದ್ದ ಹೋರಾಟದಲ್ಲಿ ಸಾವಿರಾರು ಜನ ಪಾಲ್ಗೊಂಡರು. ಅವರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತು, ಬ್ರಿಟಿಷರ ದಾಸ್ಯದಿಂದ ಬಿಡುಗಡೆ ದೊರೆಯಿತು ಎಂದು ವಿವರಿಸಿದರು.

ಮಹಾತ್ಮಾ ಗಾಂಧಿ ಅವರು ಒಮ್ಮೆ ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 25,26,27 ರಂದು 1924 ನಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ನಡೆಯಿತು. ಅದರ ಸವಿನೆನಪಿಗಾಗಿ ಬೆಳಗಾವಿಯಲ್ಲಿ ಶತಮಾನೋತ್ಸವವನ್ನು ಆಚರಿಸಲಾಯಿತು. 26 ಮತ್ತು 27 ರಂದು ಕಾರ್ಯಕ್ರಮ ಜರುಗಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

26 ರಂದು ನಡೆದ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ಮುಖಂಡರು ಭಾಗವಹಿಸಿದ್ದರು.

ಮೊದಲ ದಿನ ಮಹಾತ್ಮಾ ಗಾಂಧಿ ಅವರನ್ನು ನೆನಪುಾಡಿಕೊಳ್ಳಲಾಯಿತು. ಭಾರತದ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರ ನಿಧನದಿಂದಾಗಿ ಕಾರ್ಯಕ್ರಮ ಮುಂದೂಡಲ್ಪಟ್ಟಿತು.

27 ರಂದು ಗಾಂಧಿ ಭಾರತ ಹೆಸರಿನಲ್ಲಿ ನಡೆದು, ಘೋಷವಾಕ್ಯ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಎಂದಾಗಿತ್ತು. ಅಂದೆ ಮಹಾತ್ಮಾ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಸುವರ್ಣ ಸೌಧದಲ್ಲಿ ಅನಾವರಣ ಮಾಡಲಾಯಿತು. ವಿಧಾನ ಸಭಾ ಅಧ್ಯಕ್ಷರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಮಂತ್ರಿ ಮಂಡಲದ ಸದಸ್ಯರು, ಭಾಗವಹಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗಾಂಧಿ ಭಾರತ ಕಟ್ಟಲು ಪ್ರಾಮಾಣಿಕ ಪ್ರಯತ್ನ ಅಗತ್ಯ

ಮಹಾತ್ಮಾ ಗಾಂಧೀಜಿಯವರು ಕೇವಲ ಸ್ವಾತಂತ್ರ್ಯ ಹೋರಾಟ ಮಾಡಲಿಲ್ಲ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆತ ಮೇಲೆ ಹೇಗಿರಬೇಕೆಂದು ಪರಿಹಾರಗಳನ್ನು ನೀಡಿದ್ದರು. ಭಾರತ ದೇಶ ಗ್ರಾಮಗಳ ದೇಶ. ಗ್ರಾಮಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದ್ದರು. ಅದಕ್ಕಾಗಿಯೇ ಗ್ರಾಮ ಸ್ವರಾಜ್ಯ ಎಂಬಾ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು. ಗ್ರಾಮಗಳು ಸ್ವಾವಲಂಬಿಗಳಾಗಬೇಕು.ಆಗ ಮಾತ್ರ ಜನ, ದೇಶ ಸ್ವಾವಲಂಬಿಗಳಾಗಿ ಸಾಧ್ಯ. ಭಾರತದಲ್ಲಿ ಗುಡಿ ಕೈಗಾರಿಕೆಗಳು, ಅತಿ ಸಣ್ಣ ಕೈಗಾರಿಕೆಗಳು ಆರ್ಥಿಕತೆಯ ತಳಹದಿ. ಅದಕ್ಕೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದ್ದರು. ಗಾಂಧಿ ಭಾರತ ಕಟ್ಟುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಅವರ ಮೌಲ್ಯಗಳನ್ನು ರೂಢಿಸಿಕೊಂಡು ಅದರಂತೆ ನಡೆಯುವ ಪ್ರಯತ್ನ ಮಾಡಬೇಕು.

ಪ್ರಯಾಗ್ ರಾಜ್ ನಲ್ಲಿ *ಕಾಲ್ತುಳಿತಕ್ಕೆ ಸಿಕ್ಕು ಮೃತಪಟ್ಟವರ ದೇಹಗಳನ್ನು ತರಲು ಏರ್ ಆಂಬ್ಯುಲೆನ್ಸ್

ಪ್ರಯಾಗ್ ರಾಜ್ ನಲ್ಲಿ ನಡೆದಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತ ಪಟ್ಟಿದ್ದು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಏರ್ ಆಂಬ್ಯುಲೆನ್ಸ್ ಕಳುಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಿದ್ದು, ಇನ್ನೂ ಎಂಟು ಜನ ನಾಪತ್ತೆಯಾಗಿರುವ ಬಗ್ಗೆ ಬಗ್ಗೆ ಮಾಹಿತಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ಘೋಷಣೆ ಮಾಡಲಿದ್ದಾರೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ