ಬೆಂಗಳೂರು: ನನಗೆ ಯಾವುದೇ ಬೇಸರವಿಲ್ಲ, ಸಂಪೂರ್ಣ ಮನಸ್ಸಿನಿಂದಲೇ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಸಿಎಂ Siddaramaiah ವಿದಾಯ ಉಪಹಾರ ಸಭೆಯಲ್ಲಿ ಹೇಳಿದ್ದಾರೆ.
ಮಂತ್ರಿಗಳೊಂದಿಗೆ ನಡೆದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸೂಚನೆಯನ್ನು ಪಾಲಿಸುವುದು ನನ್ನ ಜವಾಬ್ದಾರಿ ಎಂದು ತಿಳಿಸಿದ್ದಾರೆ. ಈ ಹಿಂದೆ ನಡೆದ ಒಪ್ಪಂದದ ವಿಷಯವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, ಸಚಿವ ಸಂಪುಟ ಸಹೋದ್ಯೋಗಿಗಳ ಎದುರೇ ತಮ್ಮ ರಾಜೀನಾಮೆ ನಿರ್ಧಾರವನ್ನು ಘೋಷಿಸಿದರು.
ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸದ ಸಿದ್ದರಾಮಯ್ಯ, ಆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ ಎಂದರು. “ಮುಂದಿನ ನಾಯಕತ್ವದ ಬಗ್ಗೆ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ಮಾಡುತ್ತದೆ. ಮುಂದಿನ ಎಲ್ಲಾ ಪ್ರಕ್ರಿಯೆಗಳನ್ನೂ ಅವರೇ ನಿರ್ವಹಿಸಲಿದ್ದಾರೆ” ಎಂದು ಹೇಳಿದರು.
ಸಿದ್ದರಾಮಯ್ಯ ಈ ಮಾತುಗಳನ್ನು ಹೇಳುತ್ತಿದ್ದಂತೆ ಉಪ ಮುಖ್ಯಮಂತ್ರಿ D. K. Shivakumar ಭಾವುಕರಾದರು ಎನ್ನಲಾಗಿದೆ. ಸಿಎಂ ನೀಡಿದ್ದ ಮಾತನ್ನು ಉಳಿಸಿಕೊಂಡ ಹಿನ್ನೆಲೆ ಡಿಕೆ ಶಿವಕುಮಾರ್ ಕಣ್ಣೀರಿಟ್ಟರು ಎಂದು ಮೂಲಗಳು ತಿಳಿಸಿವೆ.
ಬೆಳಗ್ಗೆ ಕಾವೇರಿ ನಿವಾಸಕ್ಕೆ ಉಪಹಾರಕ್ಕಾಗಿ ಆಗಮಿಸಿದ್ದ ಡಿಕೆ ಶಿವಕುಮಾರ್, ಸಿದ್ದರಾಮಯ್ಯರನ್ನು ಅಪ್ಪಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಬಳಿಕ ಉಪಹಾರ ಸಭೆ ಆರಂಭವಾಗುವ ಮುನ್ನ ಇಬ್ಬರು ನಾಯಕರು ಪ್ರತ್ಯೇಕವಾಗಿ ಚರ್ಚೆ ನಡೆಸಿದರು.