Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ವೇಣುಗೋಪಾಲ್ ಕೊಲೆ ಪ್ರಕರಣದಲ್ಲಿ ರಾಜಕೀಯ ಪಿತೂರಿ ಬೇಡ - ಡಾ. ಎಚ್ ಸಿ ಮಹದೇವಪ್ಪ


ಸುದ್ದಿಮೂಲ ವಾರ್ತೆ




 ಮೈಸೂರು, ಜು.13 : ಯುವ ಬ್ರಿಗೇಡ್‌ ವೇಣುಗೋಪಾಲ ಪ್ರಕರಣದಲ್ಲಿ ರಾಜಕೀಯ ಪಿತೂರಿ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಟಿ.ನರಸೀಪುರದಲ್ಲಿ ಇರುವ ಮೃತ ವೇಣುಗೋಪಾಲ್ ನಿವಾಸಕ್ಕೆ ಗುರುವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಜೊತೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 4.12 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು.


ನಂತರ ಮಾತನಾಡಿದ ಅವರು, ವೇಣುಗೋಪಾಲ್ ನಾಯಕ್ ಹತ್ಯೆ ಪ್ರಕರಣ ಧರ್ಮ ಮತ್ತು ರಾಜಕೀಯ ವ್ಯಾಪ್ತಿಗೆ ಬರುವುದಿಲ್ಲ .ನಾಯಕ್ ಅವರು ಚೆನ್ನಾಗಿ ಹನುಮ ಜಯಂತಿ ಮಾಡಿದ್ದಾರೆ‌. ಜಯಂತಿ ವೇಳೆ ಬ್ರಿಗೇಡ್ ನಲ್ಲಿ ಇದ್ದವರೇ ಬೈಕ್ ನಿಲ್ಲಿಸುವ ವಿಚಾರಕ್ಕೆ ಹಾಗೂ ಫೋಟೋ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಆ ವೇಳೆ ಕೊಲೆಯಾಗಿದೆ ಎಂದು ಸಮರ್ಥಿಸಿದರು.


ಈ ಕೊಲೆ ಪ್ರಕರಣಕ್ಕೆ ಹಿಂದುತ್ವ ಅಜೆಂಡಾ ಫಿಕ್ಸ್ ಮಾಡುವ ಸಂಚನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಇದಕ್ಕೆ ಧರ್ಮದ ಲೇಪನ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ನನ್ನ ಮಗನ ಹೆಸರನ್ನು ವಿನಾಕಾರಣ ಎಳೆಯಲಾಗುತ್ತಿದೆ. ಹಿಂದೆಯೂ ಸಹ ಈ ರೀತಿ ಆರೋಪಗಳನ್ನು ನನ್ನ ಮಗನ ಮೇಲೆ ಬಿಜೆಪಿಯವರು ಮಾಡುತ್ತಿದ್ದರು ಎಂದು ಟೀಕಿಸಿದರು.


 ಇದು ಕೊಲೆ ಪ್ರಕರಣವಾಗಿದೆ. ಎಸ್ಸಿ ಅಥವಾ ಎಸ್ಟಿ ಸಮುದಾಯದವರು ಯಾರಾದರೂ ಈ ರೀತಿ ಕೊಲೆಯಾದರೆ 8 ಲಕ್ಷ ರೂ. ಪರಿಹಾರ ನೀಡಬಹುದು. ಈಗ ಪರಿಹಾರದ ಮೊದಲ ಕಂತು 4.12 ಲಕ್ಷ ರೂ. ಚೆಕ್ ನೀಡಲಾಗಿದ್ದು, ಉಳಿದ ಹಣವನ್ನು ಪ್ರಕರಣದ ಚಾರ್ಜ್ ಶೀಟ್ ಆದ ನಂತರ ನೀಡುತ್ತೇವೆ. ಜೊತೆಗೆ ಕೊಲೆಯಾದ ವ್ಯಕ್ತಿಯ ಪತ್ನಿಗೆ ಅವರ ವಿದ್ಯಾಭ್ಯಾಸಕ್ಕೆ ತಕ್ಕಂತೆ ಅನುಕಂಪದ ಆಧಾರದ ಮೇಲೆ ಕೆಲಸ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.


ಇದೇ ವೇಳೆ  ಕೊಲೆಯಾದ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಮಾತನಾಡಿ, ನನ್ನ ಗಂಡ ಮೂರು ವರ್ಷಗಳಿಂದ ಹನುಮ ಜಯಂತಿ ಮಾಡುತ್ತಾ ಬಂದಿದ್ದರು. ನನ್ನ ಗಂಡನ ಬಳಿ ಹಣವೂ ಇಲ್ಲ, ಅಧಿಕಾರವೂ ಇಲ್ಲ. ಆದರೂ ಅದ್ಧೂರಿಯಾಗಿ ಹನುಮ ಜಯಂತಿಯನ್ನು ಆಚರಣೆ ಮಾಡುತ್ತಿದ್ದರು. ಇದನ್ನು ಸಹಿಸದೇ ಕೊಲೆ ಮಾಡಿದ್ದಾರೆ. ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ