Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಧರ್ಮಾಧಾರಿತ ದೇಶ ನಿರ್ಮಾಣ ಮಾಡಲು ಬಿಡಲ್ಲ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಧರ್ಮಾಧಾರಿತ ದೇಶ ಕಟ್ಟಲು ಹೊರಟಿರುವವರ ವಿರುದ್ದ ಕಮ್ಯುನಿಸ್ಟ್ ಪಕ್ಷದ ಹೋರಾಟ ನಿರಂತರವಾಗಿರುತ್ತದೆಂದು ಕಮ್ಯುನಿಸ್ಟ್ ಪಾರ್ಟಿ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿದರು.


ದಾವಣಗೆರೆ ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ೧೯ ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಕಟ್ಟಕಡೆಯವರನ್ನು ಮೇಲೆತ್ತಿ ಸಮ ಸಮಾಜ ನಿರ್ಮಾಣವಾಗಬೇಕೆಂಬುದು ಕಮ್ಯುನಿಸ್ಟ್ ಪಕ್ಷದ ಉದ್ದೇಶ. ಭಗತ್‌ಸಿಂಗ್‌ರವರಲ್ಲಿ ಸಮ ಸಮಾಜದ ಕನಸಿತ್ತು. ಕಮ್ಯುನಿಸ್ಟ್ ಪಾರ್ಟಿಗೆ ದೇಶಕ್ಕಾಗಿ ಪ್ರಾಣ ಕೊಟ್ಟ ಇತಿಹಾಸವಿದೆ. ಚಳುವಳಿ, ಹೋರಾಟಗಳ ಮೂಲಕ ಜನರ ಮನಸ್ಸು ಗೆದ್ದು ಕಮ್ಯನಿಸ್ಟ್ ಕಾರ್ಯಕರ್ತರು ಚುನಾವಣೆಯಲ್ಲಿಯೂ ನಿಂತು ರಾಜಕೀಯವಾಗಿ ಅಧಿಕಾರ ಹಿಡಿಯಬೇಕು. ಬಿಹಾರ, ತಮಿಳುನಾಡು, ಕೇರಳದಲ್ಲಿ ಕಮ್ಯುನಿಸ್ಟ್ ಪಕ್ಷದ ಶಾಸಕರುಗಳಿದ್ದಾರೆ. ಚುನಾವಣೆಯಲ್ಲಿ ಯಾರನ್ನು ಗೆಲ್ಲಿಸಬೇಕು. ಯಾರನ್ನು ಸೋಲಿಸಬೇಕೆಂಬ ಶಕ್ತಿ ಕಮ್ಯುನಿಸ್ಟ್ ಪಕ್ಷಕ್ಕಿದೆ ಎಂದರು.

ದೇಶವನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಬೇಕು. ಆದಿವಾಸಿಗಳ ಹಕ್ಕಿಗಾಗಿ ಹೋರಾಟ, ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದರ ವಿರುದ್ದ ಚಳುವಳಿಯಲ್ಲಿ ತೊಡಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಸಿಪಿಐ.ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‌ಬಾಬು ಮಾತನಾಡಿ ಕಮ್ಯುನಿಸ್ಟ್ ಕಾರ್ಯಾಲಯದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ. ಪಕ್ಷದ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದೇವೆ. ಹಟ್ಟಿ ಚಿನ್ನದ ಗಣಿ ಪುನರಾರಂಭಿಸಬೇಕು. ಸೂರಿಗಾಗಿ ಸಮರ ನಮ್ಮ ಹೋರಾಟದ ಉದ್ದೇಶ. ವಿದ್ಯಾಭ್ಯಾಸ, ಆರೋಗ್ಯವನ್ನು ರಾಷ್ಟ್ರೀಕರಣಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಸಿಪಿಐ. ರಾಜ್ಯ ಮಂಡಳಿ ಸದಸ್ಯರುಗಳಾದ ಸಿ.ವೈ.ಶಿವರುದ್ರಪ್ಪ, ಟಿ.ಆರ್.ಉಮಾಪತಿ, ಚಿತ್ರದುರ್ಗ ತಾಲ್ಲೂಕು ಕಾರ್ಯದರ್ಶಿ ಸಿ.ವೈ.ಸತ್ಯಕೀರ್ತಿ, ಹೊಳಲ್ಕೆರೆ ತಾಲ್ಲೂಕು ಕಾರ್ಯದರ್ಶಿ ಅಮಿನಾಭಿ, ಹೊಸದುರ್ಗ ತಾಲ್ಲೂಕು ಕಾರ್ಯದರ್ಶಿ ಕುಮಾರಸ್ವಾಮಿ, ಚಳ್ಳಕೆರೆ ತಾಲ್ಲೂಕು ಕಾರ್ಯದರ್ಶಿ ಗಿರೀಶ್, ಮೊಳಕಾಲ್ಮುರು ತಾಲ್ಲೂಕು ಕಾರ್ಯದರ್ಶಿ ಜಾಫರ್‌ಷರೀಫ್, ಪೆನ್ನಯ್ಯ ಇವರುಗಳು ವೇದಿಕೆಯಲ್ಲಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ