LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಹಾಯ 2.0ರಲ್ಲಿ ಬರುವ ದೂರುಗಳನ್ನು ತ್ವರಿತವಾಗಿ ಇತ್ಯರ್ಥಕ್ಕೆ ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಕೆ ಹಾಗೂ ಸಹಾಯ 2.0ರಲ್ಲಿ ಬಂದಂತಹ ದೂರುಗಳಿಗೆ ಸಂಬಂಧಿಸಿದಂತೆ ಘನತ್ಯಾಜ್ಯ ನಿರ್ವಹಣಾ ನಿಯಮಿತದ ಸಭಾಂಗಣ ಕೊಠಡಿಯಲ್ಲಿ ನಡೆದ ವರ್ಚ್ಯುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 49,241 ಮಳಿಗೆಗಳಿಗೆ ನೋಟಿಸ್ ನೀಡಲಾಗಿದ್ದು, 16813 ಮಳಿಗೆಗಳು ಶೇ. 60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲಾಗಿದ್ದು, 32428 ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸಬೇಕಿದೆ. ಪೆಬ್ರವರಿ ಅಂತ್ಯದೊಳಗಾಗಿ ಎಲ್ಲಾ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಅಳವಡಿಸಿಕೊಂಡಿರಬೇಕು. ಅದಕ್ಕಾಗಿ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಆದ್ಯತೆ ಮೇರೆಗೆ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು. ಮಳಿಗೆಗಳಿಗೆ ತಿಳುವಳಿಕೆ ಪತ್ರ ನೀಡಿದ ಬಳಿಕ 7 ದಿನ ಕಾಲಾವಕಾಶ ನೀಡಿದ ಬಳಿಕವೂ ಕನ್ನಡ ನಾಮಫಲಕ‌ ಅಳವಡಿಸದಿದ್ದಲ್ಲಿ ಅಂತಹ ಮಳಿಗೆಯ ಮೇಲೆ ಶಿಸ್ತು ಕ್ರಮ ಜರುಗಿಸಿ ಕೂಡಲೆ ನಾಮಫಲಕ ಅಳವಡಿಸುವಂತೆ ಮಾಡಬೇಕೆಂದು ಸೂಚಿಸಿದರುರು: ಪಾಲಿಕೆಯ ಸಹಾಯ 2.0ರಲ್ಲಿ ಬರುವ ದೂರುಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸಬೇಕು. ದೂರುಗಳು ಬಂದ ತಕ್ಷಣ ಬಗೆಹರಿಸಬಹುದಾದ ಸಮಸ್ಯೆಗಳನ್ನು ಕೂಡಲೆ ಬಗೆಹರಿಸಬೇಕೆಂದು ವಲಯ ಆಯುಕ್ತರಿಗೆ ಸೂಚನೆ ನೀಡಿದರು.

ಆಯಾ ವಲಯ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕಸದ ಸಮಸ್ಯೆ, ಬೀದಿ ದೀಪಗಳ ಅಳವಡಿಕೆ ಹಾಗೂ ರಸ್ತೆ ಗುಂಡಿ ಸಮಸ್ಯೆಗಳ ಕುರಿತು ದೂರುಗಳು ಬರುತ್ತವೆ. ಬರುವಂತಹ ದೂರುಗಳನ್ನು ಆದ್ಯತೆ ಮೇರೆಗೆ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಕಂದಾಯ ವಿಭಾಗದ ಜಂಟಿ ಆಯುಕ್ತರಾದ ಲಕ್ಷ್ಮಿದೇವಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯ