Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಮೈಸೂರು, ಕೋಲಾರಕ್ಕೆ ಉಪನಗರ ರೈಲು: ಪರಿಷ್ಕೃತ ಪ್ರಸ್ತಾವನೆಗೆ ಸೂಚನೆ

ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.6: ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಮುತ್ತ ಜಿಲ್ಲೆಗಳಿಗೂ ವಿಸ್ತರಿಸುವ ನಿಟ್ಟಿನಲ್ಲಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಬೃಹತ್ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಮಂಗಳವಾರ ಸೂಚಿಸಿದ್ದಾರೆ.

ಮೂಲಸೌಕರ್ಯ ಇಲಾಖೆಯ ಅಧಿಕಾರಿಗಳ ಜತೆ ಖನಿಜ ಭವನದಲ್ಲಿ ನಡೆಸಿದ ಸುದೀರ್ಘ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು, ಈ ಮಹತ್ತ್ವದ ನಿರ್ದೇಶನ ನೀಡಿದ್ದಾರೆ.

ಈಗ 148 ಕಿ.ಮೀ. ಉದ್ದದ ಉಪನಗರ ರೈಲು ಯೋಜನೆಯ ಮೊದಲನೇ ಹಂತದ ಕಾಮಗಾರಿ ನಡೆಯುತ್ತಿದ್ದು, ಉದ್ದೇಶಿತ ಒಟ್ಟಾರೆ ಯೋಜನೆಗೆ 15,767 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ.  ಆದರೆ ಇದರ ಸದ್ಯದ ಸ್ವರೂಪದಿಂದ ಹೆಚ್ಚಿನ ಪ್ರಯೋಜನವಿಲ್ಲ. ಇದನ್ನು  ರಾಮನಗರದಿಂದ ಮೈಸೂರು, ದೊಡ್ಡಬಳ್ಳಾಪುರದಿಂದ ಗೌರಿಬಿದನೂರು-ಹಿಂದೂಪುರ, ಚಿಕ್ಕಬಳ್ಳಾಪುರದಿಂದ ಕೋಲಾರಕ್ಕೆ ವಿಸ್ತರಿಸಬೇಕು. ಈ ಸಂಬಂಧ ಯೋಜನೆಯನ್ನು ಪರಿಷ್ಕರಿಸಿ, ಮಂಡಳಿ ಮುಂದೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು. ಹೀಗಾದರೆ ಮಾತ್ರ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಅವರು ವಿವರಿಸಿದರು.

ಸದ್ಯಕ್ಕೆ ಸಬರ್ಬನ್ ರೈಲು ಯೋಜನೆಯನ್ನು ರಾಮನಗರ, ಚಿಕ್ಕಬಾಣಾವರ, ದೊಡ್ಡಬಳ್ಳಾಪುರ, ವೈಟ್ ಫೀಲ್ಡ್  ವರೆಗೆ ಮುಟ್ಟಿಸುವ ಗುರಿ ಇದೆ. ಆದರೆ ಇವೆಲ್ಲವೂ ಈಗಾಗಲೇ ಬೆಂಗಳೂರಿನ ಭಾಗವಾಗಿವೆ. ಆದ್ದರಿಂದ ರಾಜಧಾನಿಯ ಸುತ್ತಲಿನ  ನೂರು ಕಿ.ಮೀ. ಸುತ್ತಳತೆಯಲ್ಲಿ ಇರುವ ನಗರಗಳಿಗೆ ಸಬರ್ಬನ್ ರೈಲು ಸೌಕರ್ಯ ಒದಗಿಸಬೇಕು. ಬೆಂಗಳೂರಿನ ಉದ್ದಿಮೆಗಳಿಗೆ ಬೇಕಾದ ಜನರು ಈ ಊರುಗಳಿಂದ ಸುಗಮವಾಗಿ ದಿನವೂ ಓಡಾಡುವಂತೆ  ಆಗಬೇಕು. ಇದು ಸಂಚಾರ ದಟ್ಟಣೆಯ ಜತೆಗೆ ವಲಸೆಯ ಸಮಸ್ಯೆಗೂ ಕಡಿವಾಣ ಹಾಕುತ್ತದೆ ಎಂದು ಅವರು ವಿವರಿಸಿದ್ದಾರೆ.

ಹಂತ-1ರ ಅಡಿಯಲ್ಲಿ ಈಗಾಗಲೇ ಚಿಕ್ಕಬಾಣಾವರ ಮತ್ತು ಬೆನ್ನಿಗಾನಹಳ್ಳಿ ನಡುವೆ ಕಾಮಗಾರಿ ನಡೆಯುತ್ತಿದೆ. ಇದನ್ನು ತುಮಕೂರಿನ ಕಡೆಯಲ್ಲಿ ಡಾಬಸಪೇಟೆಯ ತನಕ ವಿಸ್ತರಿಸಬೇಕು. ಅಲ್ಲಿ ಕೈಗಾರಿಕಾ ಪ್ರದೇಶ ಇರುವ ಹಿನ್ನೆಲೆಯಲ್ಲಿ ಇದು ಅತ್ಯಗತ್ಯವಾಗಿದೆ. ಈ ಕೆಲಸವನ್ನು ಮೊದಲ ಹಂತದಲ್ಲೇ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರತೀ ಹತ್ತು ನಿಮಿಷಕ್ಕೆ ಒಂದರಂತೆ ಸಬರ್ಬನ್ ರೈಲು ಸೇವೆ ಒದಗಿಸುವುದು ನಮ್ಮ ಗುರಿಯಾಗಿದೆ. ಸುಗಮ ಸಂಚಾರ ವ್ಯವಸ್ಥೆಯ ಜಾಲವನ್ನು ಬೆಳೆಸುವುದು ಮೂಲಸೌಲಭ್ಯ ಅಭಿವೃದ್ಧಿಯ ಹೆಗ್ಗುರಿಗಳಲ್ಲಿ ಒಂದಾಗಿದೆ ಎಂದು ಪಾಟೀಲ್ ಹೇಳಿದ್ದಾರೆ.

ಸಭೆಯಲ್ಲಿ ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮೂಲಸೌಲಭ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಸಚಿವರು, ಕೈಗಾರಿಕಾ ಇಲಾಖೆಯ ನಾಲೆಡ್ಜ್ ಪಾರ್ಟನರ್ ಆಗಿರುವ ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಜತೆ ರಾಜ್ಯದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಕೈಗೆತ್ತಿಕೊಳ್ಳಬಹುದಾದ ಕೈಗಾರಿಕಾ ಯೋಜನೆಗಳನ್ನು ಕುರಿತು ವಿಸ್ತೃತ ವಿಚಾರ ವಿನಿಮಯ ನಡೆಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ