LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವಿಗೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಅನಧಿಕೃತ ಫ್ಲೆಕ್ಸ್ ಗಳ ತೀವ್ರ ತೆರವು ಕಾರ್ಯಾಚರಣೆ ನಡೆಸಿ, 8362ಕ್ಕೂ ಹೆಚ್ಚು ಫ್ಲೆಕ್ಸ್ ತೆರವು – 142 ಎಫ್.ಐ.ಆರ್ ದಾಖಲಾಗಿದೆ, ಜನ್ಮ ದಿನಾಚರಣೆ ಹಾಗೂ ಶುಭ ಹಾರೈಕೆಗಳ ಫ್ಲೆಕ್ಸ್ ಗಳನ್ನು ಅಳವಡಿಸದಿರಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ  ಎಂದು ಉಪ ಆಯುಕ್ತರು(ಜಾಹೀರಾತು) ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ಸ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗೆ 8362ಕ್ಕೂ ಹೆಚ್ಚು ಫ್ಲೆಕ್ಸ್ ಗಳನ್ನು ತೆರವುಗೊಳಿಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ 267 ದೂರುಗಳ ಪೈಕಿ 142 ಎಫ್‌ಐಆರ್ ದಾಖಲಿಸಲಾಗಿದೆ.

ನಗರದಲ್ಲಿ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳಿರದಂತೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕಟ್ಟುನಿಟ್ಟಿನ ನಿರ್ದೇಶನ ನೀಡಿರುತ್ತಾರೆ. ಈ ಸಂಬಂಧ ಎಲ್ಲಾ ವಲಯದಲ್ಲೂ ಅನಧಿಕೃತ ಜಾಹೀರಾತುಗಳು ಇರದಂತೆ ನೋಡಿಕೊಳ್ಳಲು ಹಾಗೂ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರು ಸೂಚನೆ ನೀಡಿರುತ್ತಾರೆ. ಅಲ್ಲದೆ ಅನಧಿಕೃತ ಜಾಹೀರಾತುಗಳನ್ನು ಅಳವಡಿಸುವ ವಿಚಾರವಾಗಿ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ವಲಯ ಹಿರಿಯ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಿ ವರದಿ ಪಡೆಯುತ್ತಿರುತ್ತಾರೆ.

ಅದರಂತೆ, ನಗರದಾದ್ಯಂತ ದಿನಾಂಕ: 01-06-2024 ರಿಂದ ಇದುವೆರೆಗೆ 8362 ಫ್ಲೆಕ್ಸ್/ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ 267 ದೂರುಗಳನ್ನು ದಾಖಲಿಸಲಾಗಿದೆ. 142 ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದ್ದು, 1,03,000 ರೂ. ದಂಡ ವಿಧಿಸಲಾಗಿದೆ.

ಅನಧಿಕೃತ ಜಾಹೀರಾತು ಅಳವಡಿಸಿದರೆ ಕಾನೂನು ಕ್ರಮ:

ನಗರದಲ್ಲಿ ಅನಧಿಕೃತವಾಗಿ ಅಳವಡಿಸುವ ಜಾಹೀರಾತುಗಳು ಅಳಡಿಸುವುದರಿಂದ ನಾಗರೀಕರಿಗೆ ಸಾಕಷ್ಟು ಅನಾನುಕೂಲವಾಗಲಿದೆ. ಎಲ್ಲೆಂದರಲ್ಲಿ ಜಾಹೀರಾತು ಫಲಕಗಳು ಅಳವಡಿಸುವುದರಿಂದ ಪ್ರಾಣಿಹಾನಿಯಾಗುವ ಸಂಭವವೂ ಹೆಚ್ಚಿರುತ್ತದೆ. ಈ ಸಂಬಂಧ ಅನಧಿಕೃತವಾಗಿ ಜಾಹೀರಾತು ಅಳವಡಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ.

ಜನ್ಮ ದಿನಾಚರಣೆ, ಶುಭ ಹಾರೈಕೆಗಳ ಫ್ಲೆಕ್ಸ್ ಗಳನ್ನು ಅಳವಡಿಸದಿರಲು ಮನವಿ

ನಗರದ ಪ್ರಮುಖ ರಸ್ತೆಗಳ ಬದಿ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯಗಳ ಫ್ಲೆಕ್ಸ್‌ಗಳನ್ನು ಹೆಚ್ಚು ಅಳವಡಿಸಲಾಗುತ್ತಿದೆ‌. ಈ ಸಂಬಂಧ ಯಾವುದೇ ಶುಭಾಶಯಗಳ ಕುರಿತ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸದಂತೆ ಪಾಲಿಕೆಯು ನಾಗರೀಕರಲ್ಲಿ ಮನವಿ ಮಾಡುತ್ತಿದೆ. ನಗರದ ರಸ್ತೆ ಬದಿ, ಪಾದಚಾರಿ ಮಾರ್ಗ, ಜಂಕ್ಷನ್ ಗಳು, ಮೇಲುಸೇತುವೆಗಳಲ್ಲಿ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಅಳವಡಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

ಪೊಲೀಸ್ ಅಧಿಕಾರಿಗಳ ಸಹಕಾರ:

ನಗರದಲ್ಲಿ ಅನಧಿಕೃತ ಜಾಹೀರಾತುಗಳ ತೆರವು ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳು ಸಹ ಪಾಲಿಕೆಯ ಜೊತೆ ಕೈ ಜೋಡಿಸಿ ಅನಧಿಕೃತ ಜಾಹೀರಾತುಗಳ ತೆರವು ಕಾರ್ಯಾಚರಣೆಯಲ್ಲಿ ಸಹಕಾರ ನೀಡುತ್ತಿದ್ದಾರೆ‌.

ದೂರವಾಣಿ 1533ಗೆ ಕರೆ ಮಾಡಿ ಅಥವಾ ವಾಟ್ಸಪ್ ಸಂಖ್ಯೆ 9480683939 ಗೆ ಛಾಯಾಚಿತ್ರದ ಸಮೇತ ದೂರು ನೀಡಿ

ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರೀಕರು ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸಪ್ ಸಂಖ್ಯೆ 9480683939 ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್