LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೈಕ್‍ಗಳಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸಲು ಸಾರ್ವಜನಿಕರಿಗೆ ಸೂಚನೆ

 

ಚಿತ್ರದುರ್ಗ :   ಕಳೆದ ಐದಾರು ವರ್ಷಗಳಿಂದ ಚಿತ್ರದುರ್ಗ ಕೊಟೆ ಪೊಲೀಸ್ ಠಾಣೆ ಪೊಲೀಸರ ವಶದಲ್ಲಿರುವ 30 ಮೋಟಾರ್ ಸೈಕಲ್‍ಗಳ ವಾರಸುದಾರರ ಪತ್ತೆ ಮಾಡಿ ವಿಲೇವಾರಿ ಮಾಡಲು ಉದ್ದೇಶಿಸಿದ್ದು, ಬೈಕ್ ಕಳೆದುಕೊಂಡಿರುವ ಸಾರ್ವಜನಿಕರು, ಠಾಣೆಯ ಆವರಣದಲ್ಲಿರುವ ಮೋಟಾರ್ ಬೈಕ್‍ಗಳನ್ನು ಗುರುತಿಸಿ, ದಾಖಲೆಗಳನ್ನು ಹಾಜರುಪಡಿಸುವಂತೆ ಕೋಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಸೂಚನೆ ನೀಡಿದ್ದಾರೆ.

ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯ ಪೊಲೀಸರು ಸುಮಾರು ಐದಾರು ವರ್ಷಗಳಿಂದ ಹೀರೋಹೋಂಡಾ, ಬಜಾಜ್, ಹೀರೋ, ಹೋಂಡಾ ಆಕ್ಟೀವಾ, ಟಿ.ವಿ.ಎಸ್ ಹಾಗೂ ಇತರೆ ಕಂಪನಿಗಳ ವಾರಸುದಾರರು ಪತ್ತೆಯಾಗದೇ ಇರುವ 30 ಮೋಟಾರ್ ಸೈಕಲ್‍ಗಳನ್ನು ಅಮಾನತ್ತುಪಡಿಸಿಕೊಂಡಿದ್ದು, ಈ ಬೈಕ್‍ಗಳನ್ನು ನಿಯಮಾನುಸಾರ ವಿಲೇವಾರಿ ಮಾಡುವಂತೆ ಚಿತ್ರದುರ್ಗದ 2ನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಆದೇಶ ನೀಡಿರುತ್ತಾರೆ.

ನಿಯಮಾನುಸಾರ ವಿಲೇವಾರಿ ಮಾಡಲು ಕಾಲಮಿತಿ ಇರುವುದರಿಂದ, ಮೋಟಾರು ಬೈಕ್‍ಗಳನ್ನು ಕಳೆದುಕೊಂಡಿರುವ ಸಾರ್ವಜನಿಕರು, ವಾರಸುದಾರರು ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ಠಾಣೆಯ ಆವರಣದಲ್ಲಿರುವ ಬೈಕ್‍ಗಳನ್ನು ಗುರುತಿಸಿ, 10 ದಿನಗಳ ಒಳಗಾಗಿ ದಾಖಲಾತಿಗಳನ್ನು ಹಾಜರುಪಡಿಸಿದಲ್ಲಿ, ನಿಯಮಾನುಸಾರ ಸಂಬಂಧಿಸಿದ ವಾರಸುದಾರರಿಗೆ ಬೈಕ್ ಅನ್ನು ಬಿಟ್ಟುಕೊಡಲಾಗುವುದು.  ಒಂದು ವೇಳೆ ಬೈಕ್‍ಗಳನ್ನು ಕಳೆದುಕೊಂಡಿರುವ ಸಾರ್ವಜನಿಕರು, ವಾರಸುದಾರರು ಯಾರೂ ಸಹ 10 ದಿನಗಳ ಒಳಗಾಗಿ ದಾಖಲೆಗಳನ್ನು ಹಾಜರುಪಡಿಸದೇ ಇದ್ದಲ್ಲಿ, ಅಂತಹ ಬೈಕ್‍ಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಬೆಲೆ ನಿಗದಿಮಾಡಿಸಿಕೊಂಡು, ಸಾರ್ವಜನಿಕ ಹರಾಜು ಪ್ರಕ್ರಿಯೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೋಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026