LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಮೀಕ್ಷೆ ವರದಿ ಬಗ್ಗೆ ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು, : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು.

ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಚರ್ಚೆ ಅಪೂರ್ಣವಾಗಿದೆ. ಅತ್ಯಂತ ಸೌಹಾರ್ದಯುತವಾಗಿ ನಡೆದ ಚರ್ಚೆಯಲ್ಲಿ ಜನಸಂಖ್ಯೆ ಹಿಂದುಳಿದಿರುವಿಕೆ, ಅಧ್ಯಯನ ಮಾಡುವ ಸಂದರ್ಭದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದ್ದು, ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏಪ್ರಿಲ್ 24 ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ. ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ.

*ಸಮೀಕ್ಷೆಯ ಮಾನದಂಡಗಳ ಬಗ್ಗೆ ಚರ್ಚೆ*


ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಉತ್ಪನ್ನದ ಮೂಲ ಹಾಗೂ ಕೈಗೊಂಡ ಮಾನದಂಡಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೆಲವು ಹಿರಿಯ ಸಚಿವರು ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ ಎಂದರು.

ಈ ವರದಿಯನ್ನು ಇತ್ತೀಚೆಗೆ ಸರ್ಕಾರದ ಕೈಸೇರಿದ್ದು ಮಾನದಂಡಗಳನ್ನು ಚರ್ಚಿಸಿದ್ದೇವೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹಲವಾರು ಮಾನದಂಡಗಳನ್ನು ಚರ್ಚಿಸಿದ್ದೇವೆ ಎಂದು ಸಚಿವರು ಪುನರುಚ್ಚರಿಸಿದರು.

*ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆ* 

ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆಗಳು ಹೊರಬೀಳುತ್ತಿದ್ದು, ಅವುಗಳು ಸರಿಯಾದ ವಿವರಗಳಲ್ಲ. 94.17% ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ ಎಂದರು. ಸಮೀಕ್ಷಾ ವರದಿಯ ಮಾಹಿತಿ ಪತ್ರಿಕೆಗಳಲ್ಲಿ ಈಗಾಗಲೇ ಬಂದಿದೆ.ವರದಿ ಮಂಡನೆಯಾಗಿ ಚರ್ಚೆ ನಡೆದಿದೆ ಎಂದು ಸಚಿವರು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ