LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬತ್ತಿಹೋಗಿರುವ ಕೊಳವೆ ಬಾವಿಗಳನ್ನ ಸಾಮೂಹಿಕ ಮಳೆ ನೀರು ಮರುಪುರಣಕ್ಕೆ ಬಳಸಲು ಸೂಚನೆ

ಬೆಂಗಳೂರು: ಜಲಮಂಡಳಿಯ ಕೊಳವೆ ಬಾವಿಗಳ ಸಮರ್ಪಕ ನಿರ್ವಹಣೆಗಾಗಿ ಆಧುನಿಕ ರೋಬೋಟಿಕ್‌ ತಂತ್ರಜ್ಞಾನ ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಸೂಚನೆ* ನೀಡಿದರು.

ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಕೊಳವೆ ಬಾವಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಿ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ನಗರದಲ್ಲಿ ಜಲಮಂಡಳಿಯ 11 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೆಲವು ತಾಂತ್ರಿಕ ಕಾರಣದಿಂದಾಗಿ ಬಳಸಲಾಗುತ್ತಿಲ್ಲ. ಅಸಮರ್ಪಕ ನಿರ್ವಹಣೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕೊಳವೆ ಬಾವಿಯ ಪಂಪ್‌ ಸೆಟ್‌ಗಳನ್ನ ಹೆಚ್ಚಿನ ಸಮಯ ಬಳಸುವುದು. ನೀರು ಇಲ್ಲದೇ ಮೋಟಾರ್‌ ಓಡಿಸುವುದರಿಂದ ಬಹಳಷ್ಟು ತಾಂತ್ರಿಕ ಸಮಸ್ಯೆ ಆಗುತ್ತಿದೆ. ಇವುಗಳನ್ನ ಸರಿಯಾದ ಸಮಯದಲ್ಲಿ ರಿಪೇರಿ ಮಾಡುವುದು ಸಾಧ್ಯವಾಗುತ್ತಿಲ್ಲ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಧುನಿಕ ರೋಬೋಟಿಕ್‌ ತಂತ್ರಜ್ಞಾನ ಬಳಸುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಆಧುನಿಕ ತಂತ್ರಜ್ಞಾನದಿಂದ ಪಂಪ್‌ಸೆಟ್‌ಗಳ ಮಾಹಿತಿ, ನೀರಿನ ಹರಿವಿನ ಮಾಹಿತಿ, ದುರಸ್ಥಿಯ ಮಾಹಿತಿ ಸೇರಿದಂತೆ ಆಟೋಮ್ಯಾಟಿಕ್‌ ಆಗಿ ಸ್ವಿಚ್‌ ಆನ್‌ ಮತ್ತು ಸ್ವಿಚ್‌ ಆಫ್‌ ಮಾಡುವುದು ಸಾಧ್ಯವಾಗುತ್ತದೆ. ಜಲಮಂಡಳಿಗೆ ಮಾಹಿತಿ ದೊರೆಯುವದಲ್ಲದೇ ನೀರಿಲ್ಲದೇ ಇದ್ದಾಗ ಮೋಟಾರ್‌ ಸ್ವಯಂ ಚಾಲಿತವಾಗಿ ಆಫ್‌ ಆಗುವಂತೆಯೂ ಮಾಡಬಹುದಾಗಿದೆ. ಇದರಿಂದ ಆಗಾಗ್ಗೆ ದುರಸ್ಥಿಗೆ ಬರುವುದು ತಪ್ಪುವುದಲ್ಲದೇ ಸಾರ್ವಜನಿಕರಿಗೂ ತೊಂದರೆ ಆಗುವುದು ಕಡಿಮೆಯಾಗುತ್ತದೆ ಎಂದು ಹೇಳಿದರು.

‍ಅಂತರ್ಜಲ ಕುಸಿತ ಆಗಿರುವುದರಿಂದ ಕೊಳವೆ ಬಾವಿಗಳಲ್ಲಿ ನೀರು ಕುಸಿಯುತ್ತಿದೆ. ಈ ಕೊಳವೆ ಬಾವಿಗಳನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಆಗಬೇಕಾದ ಕಾರ್ಯಗಳು, ಅವುಗಳಲ್ಲಿನ ನೀರಿನ ಲಭ್ಯತೆ, ರಿಪೇರಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು ಅಗತ್ಯವಿದೆ. ಇದಕ್ಕಾಗಿ ನಗರದಲ್ಲಿ ಇರುವಂತಹ ಜಲಮಂಡಳಿಯ ಕೊಳವೆ ಬಾವಿಗಳ ಸಮೀಕ್ಷೆ ಮಾಡುವುದು ಅಗತ್ಯವಿದೆ. ಇದಕ್ಕಾಗಿ ಜಲಮಂಡಳಿಯ ಪರವಾನಗಿ ಹೊಂದಿರುವ ಬೆಂಗಳೂರು ಕೊಳವೆ ಬಾವಿ ಗುತ್ತಿಗೆದಾರ ಸಂಘದವರು ಅಧಿಕಾರಿಗಳೊಂದಿಗೆ ಜಂಟಿಯಾಗಿ ತಮ್ಮ ವ್ಯಾಪ್ತಿಯಲ್ಲಿ ಇರುವ ಕೊಳವೆ ಬಾವಿಗಳ ಮಾಹಿತಿಯನ್ನು ಕ್ರೋಢೀಕರಿಸಿ ನೀಡುವಂತೆ ಅಧ್ಯಕ್ಷರು ಸೂಚನೆ ನೀಡಿದರು.

ಯುದ್ದೋಪಾದಿಯಲ್ಲಿ ಕೊಳವೆ ಬಾವಿಗಳ ರಿಪೇರಿ ಮಾಡಿ

ರಿವೈಂಡಿಗ್‌ ಸೇರಿದಂತೆ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಯಿಂದ ಸ್ಥಬ್ದವಾಗಿರುವ ಕೊಳವೆ ಬಾವಿಗಳನ್ನು ರಿಪೇರಿ ಮಾಡಿ ಅದನ್ನು ಸುಸ್ಥಿತಿಗೆ ತರುವುದು ಮೊದಲ ಆದ್ಯತೆ ಆಗಬೇಕಾಗಿದೆ. ಇದಕ್ಕೆ ಇರುವ ಕೆಲವು ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವಂತೆ ಗುತ್ತಿಗೆದಾರರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಆಯುಕ್ತರು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬತ್ತಿಹೋಗಿರುವ ಕೊಳವೆ ಬಾವಿಗಳನ್ನ ಸಾಮೂಹಿಕ ಮಳೆ ನೀರು ಮರುಪುರಣಕ್ಕೆ ಬಳಸಲು ಸೂಚನೆ

ನಗರದಲ್ಲಿ ಬೀಳುವ ಮಳೆಯನ್ನು ಸರಿಯಾದ ರೀತಿಯಲ್ಲಿ ಮರುಪೂರಣ ಆಗುವಂತೆ ಮಾಡುವ ನಿಟ್ಟಿನಲ್ಲಿ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಉಪಯೋಗಿಸಬಹುದಾಗಿದೆ. ಬತ್ತಿ ಹೋಗಿರುವ ಹಾಗೂ ಅವುಗಳನ್ನು ಮತ್ತೆ ಸರಿಪಡಿಸಲು ಸಾಧ್ಯ ಆಗದೆ ಇರುವ ಕೊಳವೆ ಬಾವಿಗಳನ್ನು ಮಳೆ ನೀರು ಇಂಗು ಗುಂಡಿ ಆಗಿ ಬಳಸಲು, ಅದಕ್ಕೆ ಅಕ್ಕಪಕ್ಕದ ಮನೆಗಳಿಂದ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಲು ಅಗತ್ಯ ಯೋಜನೆ ರೂಪಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಂಡಳಿಯ ಎಂಜನಿಯರ್ ಇನ್ ಚೀಫ್ ಸುರೇಶ,ಚೀಪ್ ಎಂಜನಿಯರ್ ಜಯಪ್ರಕಾಶ,ಬೆಂಗಳೂರು ಕೊಳವೆಬಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಯಣ್ಣ ಸೇರಿದಂತೆ ಇನ್ನೀತರರು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆ