LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಮಾಧ್ಯಮ ಮಾಹಿತಿ:*

 

*ಯುವ ಮತದಾರರ ನೋಂದಣಿ ಅಭಿಯಾನ:*

 

ರಾಷ್ಟ್ರದ ಭವಿಷ್ಯ ಯುವಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತ ಚಲಾಯಿಸಬೇಕೆಂದು *ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್* ರವರು ತಿಳಿಸಿದರು.

 

ವಿಜಯ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವ ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಉಳಿಸಲು ನೀವೆಲ್ಲರೂ ನಿಮ್ಮ ಶಕ್ತಿಯನ್ನು ಉಪಯೋಗಿಸಬೇಕು. ಬದಲಾವಣೆ ತರುವ ಶಕ್ತಿ ಯುವ ಸಮೂಹದಲ್ಲಿ ಮಾತ್ರವಿದ್ದು, ಅದನ್ನು ಸರಿಯಾಗಿ ಸದ್ಬಳಕೆ‌ ಮಾಡಲು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

 

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಅರ್ಜಿ ಸಲ್ಲಿಸಬಹುದು. ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಿದ್ದಾರೆ. ಜೊತೆಗೆ Voter Help Line App ಮೂಲಕ ಸ್ವಯಂಪ್ರೇರಿತವಾಗಿ ನೋಂದಣಿಯಾಗಬಹುದೆಂದು ತಿಳಿಸಿದರು.

 

ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ದೊಡ್ಡ ವಿಷಯವಲ್ಲ, ಸೇರ್ಪಡೆಯಾದ ಬಳಿಕ ಪ್ರತಿ ಚುನಾವಣೆಯಲ್ಲಿ ತಮ್ಮ ಅತ್ಯಮೂಲ್ಯವಾದ ಮತವನ್ನು ತಪ್ಪದೆ ಚಲಾಯಿಸುವುದು ದೊಡ್ಡ ವಿಷಯವೆಂದು ಹೇಳಿದರು.

 

*1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ:*

 

ವಿಜಯ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 4000 ವಿದ್ಯಾರ್ಥಿಗಳಿದ್ದು, 1000ಕ್ಕೂ ಹೆಚ್ಚು ಮಕ್ಕಳನ್ನು ಮತದಾರರ ಪಟ್ಟಿಯಲ್ಲಿ‌ ನೋಂದಣಿ ಮಾಡಿಸಲಾಗುತ್ತಿದೆ ಎಂದು ಶಿಕ್ಷಕರೊಬ್ಬರು ಮಾಹಿತಿ ನೀಡಿದರು.

ಈ ವೇಳೆ ಜಿಲ್ಲಾ ಸ್ವೀಪ್‌ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿಯಾದ ಪೂರ್ಣಿಮಾ, ಕಾಲೇಜು‌ ಪ್ರಾಂಶುಪಾಲರಾದ ಡಾ. ವೈ ವೆಂಕಟೇಶಪ್ಪ, ಮತದಾರ ನೋಂದಣಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ