LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ

*ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ*

 

*ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ವಿಭಿನ್ನ ಪ್ರಯತ್ನ*

 

*ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ*

 

ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನಗಳನ್ನ ಬೆಂಗಳೂರಿನ ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

 

ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನ ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುತ್ತದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸೊಳ್ಳೆಗಳು ಹೆಚ್ಚಿರೋ ಕಡೆ ಈ ಸಾಧನ ಅಳವಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಿವೆ.

 

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಡಿಸ್ ಸೊಳ್ಳೆಗಳನ್ನ ನಾಶಪಡಿಸುವ ಬಯೋ ಸಾಧನಗಳನ್ನ ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ.. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಚೆನ್ನಾಗಿ ಆದರೆ ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ ಕಂಟ್ರೋಲ್ ಗೆ ತರಬಹುದು. ಮುಂಬೈನ ಧಾರವಿ ಕೊಳಗೇರಿ ಪ್ರದೇಶದಲ್ಲೂ ಈ ಪ್ರಯೋಗ ನಡೀತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನ ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

 

*ಏನಿದು ಬಯೋ ಟ್ರ್ಯಾಪ್ ಸಾಧನ*

 

ಇದೊಂದು ಮಡಿಕೆ ಆಕಾರದ ಸಾಧನವಾಗಿದೆ.

ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರಸಲಾಗುತ್ತದೆ.

ರಾಸಾಯನಿಕ ಮಿಶ್ರಣ ಸೊಳ್ಳೆಗಳನ್ನ ಆಕರ್ಷಿಸಿ ಸಾಯಿಸುತ್ತೆ.

ಈಡಿಸ್ ಸೊಳ್ಳೆಗಳು ಹಾಗೂ ಸೊಳ್ಳೆಗಳ ಮೊಟ್ಟೆಗಳನ್ನ ನಾಶಪಡಿಸುತ್ತದೆ.

ಬಯೋ ಟ್ರ್ಯಾಪ್ ಬಳಕೆಯಿಂದ ಶೇ.60 ರಷ್ಟು ಸೊಳ್ಳೆಗಳ ನಿಯಂತ್ರಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರಮಂಜು ಪಾಂಡವಪುರ ನಿರ್ದೇಶನದಲ್ಲಿ " ಮಣ್ಣಿನ ಮಗ ಮಾರ್ಗದರ್ಶಿ " ರೈತ ಸಾಧಕನ ಕುರಿತ ಸಾಕ್ಷಾಚಿತ್ರಕೋರಮಂಗಲದಲ್ಲಿ ಇಂದ್ರಿಯ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಹೊಸ ಮಳಿಗೆ ಆರಂಭಕುಮಾರಿ ವರ್ಷ ಅದ್ದೂರಿಯಾಗಿ ಭರತನಾಟ್ಯ ರಂಗ ಪ್ರವೇಶಉಚಿತ ಕಣ್ಣು ಹಾಗೂ ಆರೋಗ್ಯ ತಪಾಸಣಾ ಶಿಬಿರ