LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸಭೆಯ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳ ಸಭೆಯಲ್ಲಿ ಸಹಕಾರ ಕೋರಿ, ಸೂಚನೆ ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್

ಬೆಂಗಳೂರು: ಅಕ್ಟೋಬರ್ 21 ರ ಸೋಮವಾರದಂದು ಸನ್ಮಾನ್ಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ನೂತನವಾಗಿ ರಚಿಸಲ್ಪಟ್ಟ ವಿಧಾನ ಮಂಡಲದ / ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳ ಸಭೆಯನ್ನು ನಡೆಸಿದರು.

ನಂತರ ಅವರು, ಸಮಿತಿ ಪದ್ಧತಿಯನ್ನು ಬಲಪಡಿಸುವ ಬಗ್ಗೆ ಸಮಿತಿ ಅಧ್ಯಕ್ಷರುಗಳ ಸಹಕಾರವನ್ನು ಕೋರಿ, ಅಗತ್ಯ ಸೂಚನೆಗಳನ್ನು ನೀಡಿದರು. ವಿಧಾನ ಮಂಡಲದ/ವಿಧಾನ ಸಭೆಯ ಸಮಿತಿಗಳ ವರದಿಗಳ ಪ್ರಾಮುಖ್ಯತೆಯನ್ನು ಅರಿಯಲು ಹಾಗೂ ವರದಿಗಳಲ್ಲಿ ಶಿಫಾರಸ್ಸುಗಳ ಅನುಷ್ಠಾನದ ಬಗ್ಗೆ ಕಾರ್ಯಾಂಗದ ಗಮನಕ್ಕೆ ತರಲು ಅನುಕೂಲವಾಗುವಂತೆ ಅವುಗಳನ್ನು ಸದನದಲ್ಲಿ ಚರ್ಚಿಸಲು ದಿನ ನಿಗದಿಪಡಿಸಿ ಸಮಿತಿಗಳ ಪ್ರಾಮುಖ್ಯತೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಸಮಿತಿ ಸಭೆಗಳು ಪ್ರತಿ ತಿಂಗಳಲ್ಲಿ ನಾಲ್ಕು ದಿನಗಳು ನಡೆಯುತ್ತಿರುವುದರಿಂದ ಒಂದು ಸಭೆಯನ್ನು ಕಡ್ಡಾಯವಾಗಿ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಬಗ್ಗೆ ಮೀಸಲಿಟ್ಟು ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೊಳಿಸಿ ಕಾರ್ಯಾಂಗವು ಶಾಸಕಾಂಗಕ್ಕೆ ಜವಾಬ್ದಾರಿಯಾಗಿದೆ ಎಂದರು.

ಎಲ್ಲಾ ಸಮಿತಿ ಸಭೆಗಳಿಗೆ ಸರ್ಕಾರದ ಇಲಾಖಾ ಮುಖ್ಯಸ್ಥರು ಅಂದರೆ ಸರ್ಕಾರದ ಕಾರ್ಯದರ್ಶಿ ಹಾಗೂ ಮೇಲ್ಪಟ್ಟ ಅಧಿಕಾರಿಗಳು ಭಾಗವಹಿಸಿ ಸಮಿತಿಗಳಿಗೆ ಸಹಕರಿಸುವಂತೆ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸಭೆಯಲ್ಲಿ ಹಾಜರಿದ್ದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆಯನ್ನು ನೀಡಿದರು.

ಸಮಿತಿ ಸಭೆಗಳಿಗೆ ಅಗತ್ಯವಿರುವ ಮಾಹಿತಿಗಳನ್ನು ಕನಿಷ್ಠ ಸಭೆಯ ಮೂರು ದಿನಗಳಿಗೆ ಮುಂಚಿತವಾಗಿ ಒದಗಿಸಿ ಸಮಿತಿ ಸದಸ್ಯರುಗಳು ಸಕ್ರೀಯವಾಗಿ ಭಾಗವಹಿಸಲು ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಮಿತಿಗಳ ಯಶಸ್ವೀ ಕಾರ್ಯನಿರ್ವಹಣೆಗೆ ವಿಧಾನ ಸಭೆ ಸಚಿವಾಲಯದಲ್ಲಿ ಒಬ್ಬ ಸಮನ್ವಯಾಧಿಕಾರಿಯನ್ನು ಅವರನ್ನು ನೇಮಿಸುವ ಬಗ್ಗೆ ಸಮಿತಿಯ ಅಧ್ಯಕ್ಷರುಗಳ ಗಮನಕ್ಕೆ ತರಲಾಯಿತು.

ಅಂತಿಮವಾಗಿ ಸಭಾಧ್ಯಕ್ಷರು ವಿಧಾನ ಮಂಡಲದ/ವಿಧಾನ ಸಭೆಯ ಸಮಿತಿಗಳು ಅತ್ಯಂತ ಕ್ರೀಯಾಶೀಲವಾಗಿ ಕಾರ್ಯನಿರ್ವಹಿಸಿ ಜವಾಬ್ದಾರಿಯುತವಾಗಿರುವುದನ್ನು ಶಾಸಕಾಂಗಕ್ಕೆ ಅನುಷ್ಠಾನಗೊಳಿಸಿ ಸಂಸದೀಯ ಕಾರ್ಯಾಂಗ ಪದ್ದತಿಯನ್ನು ಬಲಿಷ್ಠಗೊಳಿಸಬೇಕೆಂದು ವಿನಂತಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರಮಂಜು ಪಾಂಡವಪುರ ನಿರ್ದೇಶನದಲ್ಲಿ " ಮಣ್ಣಿನ ಮಗ ಮಾರ್ಗದರ್ಶಿ " ರೈತ ಸಾಧಕನ ಕುರಿತ ಸಾಕ್ಷಾಚಿತ್ರಕೋರಮಂಗಲದಲ್ಲಿ ಇಂದ್ರಿಯ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಹೊಸ ಮಳಿಗೆ ಆರಂಭಕುಮಾರಿ ವರ್ಷ ಅದ್ದೂರಿಯಾಗಿ ಭರತನಾಟ್ಯ ರಂಗ ಪ್ರವೇಶ