LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿಜೆಪಿ ನಿಯೋಗ, ಸ್ವಾಮೀಜಿಗಳು

ನವದೆಹಲಿ: ಭಾರತೀಯರ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರನ್ನು ಸಂಗ್ರಾಮದಲ್ಲಿ ಮಣಿಸಿ ವಿಜಯದ ಕಹಳೆ ಮೊಳಗಿಸಿದ ಕರ್ನಾಟಕದ ಹೆಮ್ಮೆಯ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನ ಕಿತ್ತೂರು ವಿಜಯೋತ್ಸವದ ಅಂಗವಾಗಿ ನವದೆಹಲಿಯಲ್ಲಿ ಪೂಜ್ಯ ಸ್ವಾಮಿಜೀಗಳು, ಲೋಕಸಭೆಯ ಸಭಾಪತಿಗಳಾದ ಓಂ ಬಿರ್ಲಾ ,ಸಚಿವರಾದ ಪ್ರಹ್ಲಾದ್ ಜೋಶಿಜೀ ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ಅವರೊಂದಿಗೆ ರಾಣಿ ಚೆನ್ನಮ್ಮನ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಭಾರತೀಯರ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರನ್ನು ಸಂಗ್ರಾಮದಲ್ಲಿ ಮಣಿಸಿ ವಿಜಯದ ಕಹಳೆ ಮೊಳಗಿಸಿದ ಕರ್ನಾಟಕದ ಹೆಮ್ಮೆಯ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನ ಕಿತ್ತೂರು ವಿಜಯೋತ್ಸವದ ಮಹಾನ್ ಚೇತನವಾಗಿದ್ದಾರೆ. ಅವರು ನಾಡಿಗೆ ಇದ್ದ ಅಪಾರ ಅಭಿಮಾನ, ಕಾಳಜಿಯನ್ನು ಅವರ ವಿಜಯೋತ್ಸವದ ಮೂಲಕ ನೋಡಬಹುದಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ಬೆಳೆದು ಬಂದ ಹಾಗೆ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ದೇಶವನ್ನು ರಕ್ಷಣೆ ಮಾಡಿದ ಹಾಗೂ ತಮ್ಮ ಕುಟುಂಬವನ್ನೇ ದೇಶಕ್ಕಾಗಿ ಹೋರಾಟಕ್ಕಾಗಿ ಪ್ರಾಣತಿತ್ತ ವೀರ ಮಹಿಳೆಯ ಬಗ್ಗೆ ಗುಣಗಾನವನ್ನು ಮಾಡಿದರು.

ಈ ಸಂದರ್ಭದಲ್ಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ,ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ - ಎಂಪಿ,ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ , ಅರವಿಂದ್ ಬೆಲ್ಲದ ಹಾಗೂ ದೆಹಲಿ ಚೆನ್ನಮ್ಮಾಜಿ ಅಭಿಮಾನಿ ಸಮೂಹ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ