Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಜಲಶಕ್ತಿ ಅಭಿಯಾನ : ತುಮಕೂರಿನಲ್ಲಿ ಕೇಂದ್ರ ತಂಡದಿಂದ ವೀಕ್ಷಣೆ

ಸುದ್ದಿಮೂಲ ವಾರ್ತೆ

ತುಮಕೂರು, ಜೂ.8 : ಜಲಶಕ್ತಿ ಅಭಿಯಾನದ ಕೇಂದ್ರ ತಂಡವು ತುಮಕೂರು ಜಿಲ್ಲೆಯ ನಗರ, ತಾಲ್ಲೂಕು ಹಾಗೂ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ


ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆ ಹಾಗೂ ಇತರೆ ಯೋಜನೆಗಳಡಿ


ಅನುಷ್ಠಾನಗೊಳಿಸಿರುವ ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳನ್ನು ವೀಕ್ಷಿಸಿದರು.


ಪ್ರಮುಖವಾಗಿ ಜಲಸಂರಕ್ಷಣಾ ಕಾಮಗಾರಿಗಳಾದ ಕೆರೆ-ಕಟ್ಟೆಗಳ ಅಭಿವೃದ್ಧಿ, ಮಳೆ ನೀರು ಸಂಗ್ರಹಣಾ ಕಾಮಗಾರಿ, ಕಲ್ಯಾಣಿ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಅಮೃತ ಸರೋವರ ಕಾಮಗಾರಿಯನ್ನು ಪರಿಶೀಲಿಸಿದರು.



ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸರಹಳ್ಳಿ ಗ್ರಾಮದ

ಓಬಯ್ಯನಕಟ್ಟೆ ಅಮೃತ ಸರೋವರ ಕಾಮಗಾರಿ, ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿನ ಕಲ್ಯಾಣಿ ಅಭಿವೃದ್ಧಿ ಕಾಮಗಾರಿ, ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಲಗೊಲ್ಲಹಳ್ಳಿ ಗ್ರಾಮದ ಗುಂಡನಕಟ್ಟೆ ಅಭಿವೃದ್ಧಿ ಕಾಮಗಾರಿ, ಬುಕ್ಕಪಟ್ಟಣ ಗ್ರಾಮದ ದೊಡ್ಡಮ್ಮ ದೇವಿ ದೇವಾಲಯದ ಸಮೀಪ ಕಲ್ಯಾಣಿ ಅಭಿವೃದ್ಧಿ ಕಾಮಗಾರಿ ಸೇರಿದಂತೆ ತೀತಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಗನಪಾಳ್ಯ ಅಮೃತ ಸರೋವರ ಕಾಮಗಾರಿಯನ್ನು ವೀಕ್ಷಿಸಿದರು.



ಮದ್ಯಾಹ್ನದ ನಂತರ ತುಮಕೂರು ತಾಲ್ಲೂಕು ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಯ್ಯನಪಾಳ್ಯ

ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ನಿರ್ಮಿಸಿರುವ ಚೆಕ್‌ ಡ್ಯಾಂ ಕಾಮಗಾರಿ, ಹರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಣ್ಣೆಪಾಳ್ಯದಲ್ಲಿ ಅಮೃತ ಸರೋವರ ಕಾಮಗಾರಿಯನ್ನು ವೀಕ್ಷಿಸಿದರು. ನಂತರ ತುಮಕೂರು ನಗರದ ಶೆಟ್ಟಿಹಳ್ಳಿ ಕೆರೆ, ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಿದ್ದ ಮಳೆ ನೀರು ಸಂಗ್ರಹಣಾ ಕಾಮಗಾರಿ ಹಾಗೂ ಅಮಾನಿಕೆರೆ ಕಾಮಗಾರಿಗಳನ್ನು ವೀಕ್ಷಿಸಿದರು.



ವಾಣಿಜ್ಯ ಸಚಿವಾಲಯದ ನಿರ್ದೇಶಕರು ಹಾಗೂ ಜಲಶಕ್ತಿ

ಅಭಿಯಾನದ ಕೇಂದ್ರ ನೋಡಲ್‌ ಅಧಿಕಾರಿ ಅಮಿತ್‌ ಕುಮಾರ್‌ ಅಗರವಾಲ್‌, ತುಮಕೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಸೇರಿದಂತೆ ಅಮೃತ ಸರೋವರ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲಾಗಿದೆ. ಇದರಿಂದಾಗಿ ಸುತ್ತಮುತ್ತಲ ಪ್ರದೇಶಗಳು ಹಾಗೂ ಗ್ರಾಮಸ್ಥರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಜಲಶಕ್ತಿ ಅಭಿಯಾನದ ತಾಂತ್ರಿಕ ಅಧಿಕಾರಿ ಹಾಗೂ ವಿಜ್ಞಾನಿ  ಡಾ. ಸುಚೇತನ ಬಿಸ್ವಾಸ್‌,, ಅತೀಕ್‌ ಪಾಷ ಉಪ ಕಾರ್ಯದರ್ಶಿ (ಅಭಿವೃದ್ಧಿ), ಜಿಲ್ಲಾ ಪಂಚಾಯತ್‌,


ತುಮಕೂರು, ಸಹಾಯಕ ನಿರ್ದೇಶಕರು (ಗ್ರಾ.ಉ) ತುಮಕೂರು ತಾಲ್ಲೂಕು, ಎ.ಡಿ.ಪಿ.ಸಿ ನಂಜೇಗೌಡ, ಜಿಲ್ಲಾ ಐ.ಇ.ಸಿ., ಸಂಯೋಜಕರಾದ ಉಮೇಶ್‌ ಹುಲಿಕುಂಟೆ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತಾಂತ್ರಿಕ ಸಿಬ್ಬಂದಿಗಳು ಹಾಜರಿದ್ದರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ