Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನ. 1ರಿಂದ ‘ನೇಗಿಲ ಯೋಗಿ’ ಆ್ಯಪ್ ಸೇವೆ

ಬೆಂಗಳೂರು, ಅ. 5 : (ಸಮದರ್ಶಿ ಸುದ್ದಿ) - ರಾಜ್ಯದಲ್ಲಿ ಕೃಷಿ ಯಾಂತ್ರೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದ ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆಯ ಆ್ಯಪ್ ಸೇವೆಯನ್ನು ನವೆಂಬರ್ 1ರಿಂದ ಆರಂಭಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚಿಸಿದ್ದಾರೆ. ಯೋಜನೆಗಾಗಿ ಸಿದ್ಧಪಡಿಸಿರುವ ‘ಜೆ ಫಾರ್ಮ್ ಆ್ಯಪ್’ನಲ್ಲಿ ಈಗಾಗಲೇ 2.5 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದು, ಇದರ ಮೂಲಕ ಅಗತ್ಯವಿರುವ ರೈತರಿಗೆ ಕೃಷಿ ಯಂತ್ರೋಪಕರಣಗಳ ಸೇವೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮುಖ್ಯಮಂತ್ರಿಗಳ 100 ದಿನಗಳ ಕಾರ್ಯಯೋಜನೆ, ನೇಮಕಾತಿ ಹಾಗೂ ಆದ್ಯತಾ ಯೋಜನೆಗಳ ಕುರಿತು ಸೋಮವಾರ ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳ ಅನುಷ್ಠಾನವನ್ನು ಪರಿಶೀಲಿಸಲಾಯಿತು.

ಮುಖ್ಯಮಂತ್ರಿ ರೈತ ಚೈತನ್ಯ ಅಗ್ರಿಟೆಕ್ ಮಿಷನ್ ಕುರಿತು ರೈತರಿಗೆ ಈಗಾಗಲೇ 25 ಲಕ್ಷ ಎಸ್‌ಎಂಎಸ್‌ಗಳನ್ನು ಕಳುಹಿಸಲಾಗಿದೆ. ಯೋಜನೆಯ ಮಾಹಿತಿಯನ್ನು ರೈತರು ಸುಲಭವಾಗಿ ಅರ್ಥಮಾಡಿಕೊಳ್ಳಲು ವಿಡಿಯೊ ಸಂದೇಶಗಳನ್ನೂ ಕಳುಹಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ರೈತರಿಗೆ ಮಾಹಿತಿ ಮತ್ತು ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದ ಚಾಟ್‌ಬಾಟ್ ಸಂಯೋಜನೆಯ ಕೆಲಸ ಪ್ರಗತಿಯಲ್ಲಿದೆ. ಡ್ರೋನ್ ಹಾಗೂ ಉಪಗ್ರಹ ಆಧಾರಿತ ತಂತ್ರಜ್ಞಾನದ ಮೂಲಕ ಬೆಳೆ ಅಂದಾಜು ನಡೆಸಲು ಮತ್ತು ಡಿಜಿಟಲ್ ಬೆಳೆ ಸಮೀಕ್ಷೆ ಕೈಗೊಳ್ಳಲು ಟೆಂಡರ್ ಕರೆಯುವ ಸಿದ್ಧತೆ ನಡೆಯುತ್ತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತಿಗೂ ಹೆಚ್ಚಿನ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ. 2027ರ ಮಾರ್ಚ್ ಅಂತ್ಯದೊಳಗೆ 2,000 ರೈತರನ್ನು ರಫ್ತುದಾರರನ್ನಾಗಿ ಸಿದ್ಧಪಡಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ರೈತರಿಗೆ ತರಬೇತಿ ನೀಡಿ, ಅಗತ್ಯ ಪ್ರಮಾಣೀಕರಣ ಮತ್ತು ರಫ್ತು ಪ್ರಕ್ರಿಯೆಗಳ ಕುರಿತು ಮಾರ್ಗದರ್ಶನ ನೀಡಲಾಗುವುದು.

ರೈತರು ಒಟ್ಟಾಗಿ ಸಮೂಹ ಕೃಷಿ ಕೈಗೊಳ್ಳುವಂತೆ ಉತ್ತೇಜಿಸಬೇಕು. ಕೃಷಿ ಉತ್ಪನ್ನಗಳ ವೈಜ್ಞಾನಿಕ ಸಂಸ್ಕರಣೆ ಮತ್ತು ಸಂಗ್ರಹಣೆಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. ಪುಷ್ಪೋದ್ಯಮಕ್ಕೆ ಉತ್ತೇಜನ ನೀಡುವ ಜತೆಗೆ ಹೂವುಗಳ ಮಾರುಕಟ್ಟೆ ನಿರ್ಮಾಣಕ್ಕಾಗಿ ಕನಿಷ್ಠ ಐದು ಎಕರೆ ಜಾಗ ಗುರುತಿಸುವಂತೆಯೂ ಸೂಚಿಸಲಾಗಿದೆ.

ಪಶುಸಂಗೋಪನಾ ಇಲಾಖೆಯ ಮೂಲಕ ಪ್ರೊಟೀನ್ ಮಿಷನ್ ಅಡಿಯಲ್ಲಿ ಚಾಮರಾಜನಗರ, ಚಿತ್ರದುರ್ಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ನಾಲ್ಕು ಪ್ರೊಟೀನ್ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಜಾನುವಾರು ಮತ್ತು ಕುಕ್ಕುಟ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುವುದರೊಂದಿಗೆ ಮೊಟ್ಟೆ ಉತ್ಪಾದನೆಯ ಮೌಲ್ಯವನ್ನು ₹1,058 ಕೋಟಿಯಿಂದ ₹1,137 ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ.

ರೈತರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಪರಿಹಾರವಾಗಿ ಸೋಲಾರ್ ವ್ಯವಸ್ಥೆ ಅಳವಡಿಸಿಕೊಳ್ಳಲು ಶೇ 50ರಷ್ಟು ಸಬ್ಸಿಡಿ ನೀಡುವ ಪ್ರಸ್ತಾವನೆಯೂ ಸರ್ಕಾರದ ಮುಂದಿದೆ. ಈ ಕುರಿತು ಮಂಗಳವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ