Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಧಿಕಾರಿಗಳು ಪ್ರಾಮಾಣಿಕ, ನ್ಯಾಯಯುತವಾಗಿ ಕರ್ತವ್ಯಗಳನ್ನು ನಿರ್ವಹಿಸಬೇಕು - ಉಪ ಲೋಕಾಯುಕ್ತ ಕೆ. ಎನ್. ಫಣೀಂದ್ರ

ಸುದ್ದಿಮೂಲ ವಾರ್ತೆ

ಮೈಸೂರು,ಜೂ.17: ಅಧಿಕಾರಿಗಳು ಪಾರದರ್ಶಕ, ಪ್ರಾಮಾಣಿಕ ಹಾಗೂ ನ್ಯಾಯಯುತವಾಗಿ ಸರ್ಕಾರದ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಕರ್ನಾಟಕ ಉಪಲೋಕಾಯುಕ್ತ ಕೆ. ಎನ್. ಫಣೀಂದ್ರ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ 7 ಜಿಲ್ಲೆಗಳಲ್ಲಿ ಅಹವಾಲು ಸ್ವೀಕಾರ ಮಾಡಲಾಗಿದೆ. ಇದು 8ನೇ ಜಿಲ್ಲೆಯಾಗಿದ್ದು ಕಾರ್ಯಕ್ರಮದ ಉದ್ದೇಶ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವದ ಮೇಲೆ ನಡೆಯುತ್ತಿದೆ ಎಂದು ಹೇಳಿದರು.

ಜನರ ಜೀವನವನ್ನು ಸುಧಾರಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತದೆ. ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ಎಲ್ಲೆಲ್ಲಿ ಕಾರ್ಯಾಂಗ, ಶಾಸಕಾಂಗ ತಪ್ಪು ದಾರಿ ಹಿಡಿದು ಕಾನೂನು ಉಲ್ಲಂಘನೆ ಮಾಡಿದರೆ, ಕರ್ತವ್ಯ ಲೋಪ ಎಸಗಿದರೆ ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳುತ್ತದೆ. ಲೋಕಾಯುಕ್ತ ಸಂಸ್ಥೆ ಕರ್ತವ್ಯ ಲೋಪ ಪರಿಶೀಲಿಸಿ ಕರ್ತವ್ಯ ಲೋಪ ಎಸಗಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಲೋಕಾಯುಕ್ತಕ್ಕೆ ದೂರನ್ನು ನೀಡಬೇಕು ಅಥವಾ ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು. ಅನಾವಶ್ಯಕವಾಗಿ ಸುಳ್ಳು ದೂರುಗಳನ್ನು ಸಲ್ಲಿಸಿದರೆ ಸುಳ್ಳು ದೂರು ಸಲ್ಲಿಸುವವರನ್ನು 6 ತಿಂಗಳು ಜೈಲಿಗೆ ಕಳುಹಿಸುವ ಅಧಿಕಾರ ಲೋಕಾಯುಕ್ತ ಸಂಸ್ಥೆಗೆ ಇದೆ ಎಂದು ಮಾಹಿತಿ ನೀಡಿದರು

ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ಲೋಕಾಯುಕ್ತ ಉಪ ನಿಬಂಧಕರಾದ ಚನ್ನಕೇಶವ ರೆಡ್ಡಿ, ಅಪರ ನಿಬಂಧಕರಾದ ಶಿವಕುಮಾರ್ ಬಿ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್, ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್. ಪಿ. ಸುರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ