Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜೂ.21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿ.ಕೆ.ಹರಿಪ್ರಸಾದ್‌ ಪದಗ್ರಹಣ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್‌ರವರು ಜೂ.೨೧ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಸ್ವೀಕರಿಸುತ್ತಿರುವ ಸಮಾರಂಭಕ್ಕೆ ಜಿಲ್ಲೆಯಿಂದ ಐದು ಸಾವಿರ ಜನ ಪಾಲ್ಗೊಳ್ಳುತ್ತೇವೆಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಕಟ್ಟಾಳು, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾಗಿ, ನಾಲ್ಕು ಬಾರಿ ರಾಜ್ಯಸಭೆಗೆ ನೇಮಕಗೊಂಡಿದ್ದ ಸಂಘಟನಾ ಚತುರ ಬಿ.ಕೆ.ಹರಿಪ್ರಸಾದ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಗೆಲುವು ಸಿಗುತ್ತದೆಂದು ಹೇಳಿದರು.

ವಿದ್ಯಾರ್ಥಿ ನಾಯಕನಾಗಿದ್ದ ಬಿ.ಕೆ.ಹರಿಪ್ರಸಾದ್‌ರವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಸ್ತಾಂತರಿಸಲಿದ್ದಾರೆ, ಪಕ್ಷದ ಯುವ ನೇತಾರ ರಾಹುಲ್‌ಗಾಂಧಿ, ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೆವಾಲ ಇವರುಗಳನ್ನು ಆಹ್ವಾನಿಸಿದ್ದೇವೆ. ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂದಿಸಲಾಗುವುದು. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ತಪ್ಪದೆ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಬೇಕು.

ಜಿಲ್ಲೆಯ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳು ಜನರನ್ನು ಕರೆತರಬೇಕು. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನ ಸೇರಿ ಶಕ್ತಿ ಪ್ರದರ್ಶಿಸಬೇಕಿದೆ. ರಾಜ್ಯ ಸರ್ಕಾರ ಈಗಾಗಲೆ ಮೂರು ವರ್ಷಗಳನ್ನು ಪೂರೈಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷದ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ಸಿದ್ದರಾಗಬೇಕೆಂದು ಮನವಿ ಮಾಡಿದರು.

ಸರ್ಕಾರದ ಪಂಚ ಗ್ಯಾರೆಂಟಿಯಿಂದ ರಾಜ್ಯ ಹಸಿವು, ಬಡತನ ಮುಕ್ತವಾಗಿದೆ. ಇದನ್ನು ಸಹಿಸದೆ ಬಿಜೆಪಿ.ಯವರು ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸುತ್ತಿರುವುದರಲ್ಲಿ ಅರ್ಥವಿಲ್ಲ. ಬಿಹಾರ ಸೇರಿದಂತೆ ಅನೇಕ ರಾಜ್ಯಗಳು ನಮ್ಮ ಯೋಜನೆಗಳನ್ನು ಕಾಪಿ ಮಾಡಿ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದಿವೆ. ಪ್ರಜಾಪ್ರಭುತ್ವಕ್ಕೆ ಇದು ಮಾರಕ ಎಂದು ವಿರೋಧಿಗಳಿಗೆ ಹೆಚ್.ಆಂಜನೇಯ ತಿರುಗೇಟು ನೀಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ನನ್ನ ವೈಫಲ್ಯದಿಂದ ಸೋಲನುಭವಿಸಬೇಕಾಯಿತು. ನಮ್ಮ ಪಕ್ಷದವರೆ ಕೆಲವರು ಬಿಜೆಪಿ. ಏಜೆಂಟರಾಗಿ ಅವರು ಕೊಡುವ ಎಂಜಲು ಕಾಸಿಗೆ ಬಲಿಯಾದರು. ಪಕ್ಷ ನನಗೆ ಎಲ್ಲಾ ಅಧಿಕಾರ ಕೊಟ್ಟಿದೆ. ವಿಧಾನಪರಿಷತ್ ಸದಸ್ಯನಾಗಿ ಮಾಡುವಂತೆ ನಾನು ಯಾರನ್ನು ಕೇಳಿಲ್ಲ. ಎಂಎಲ್‌ಸಿ. ಚುನಾವಣೆಯಲ್ಲಿ ಪಕ್ಷದ ನಿಷ್ಟಾವಂತರಿಗೆ ಅವಕಾಶ ನೀಡಬೇಕು. ಸದ್ಯದಲ್ಲಿಯೇ ಎಐಸಿಸಿ. ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಬಳಿ ನಿಯೋಗ ಹೊರಟು ನಮ್ಮ ಅಹವಾಲು ಸಲ್ಲಿಸುತ್ತೇವೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷಗಳು ಕಳೆದಿದೆ. ಕಾಂಗ್ರೆಸ್ ನಮ್ಮನ್ನು ಕಡೆಗಣಿಸಿಲ್ಲ. ಈಗ ಕಡೆಗಣಿಸುತ್ತಿದೆ ಎನ್ನುವ ಅನುಮಾನ ಕಾಡುತ್ತಿದೆ. ಒಳ ಮೀಸಲಾತಿಯಲ್ಲಿ ಲೋಪವಾಗಿದೆ. ಅದನ್ನು ಸರಿಪಡಿಸಿ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಹೋರಾಟ ನಡೆಸುತ್ತೇನೆಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ, ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ವಕ್ಪ್ ಬೋರ್ಡ್ ಮಾಜಿ ಚೇರ್ಮನ್ ಅನ್ವರ್‌ಭಾಷಾ, ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‌ಕುಮಾರ್, ಹೆಚ್.ಅಂಜಿನಪ್ಪ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಹೊಳಲ್ಕೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ