Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ದೇವರಗುಡ್ಡ ಬನ್ನಿ ಉತ್ಸವದಲ್ಲಿ ಒಂದು  ಸಾವು, ಹಲವಾರು  ಮಂದಿಗೆ ಗಾಯ

ಬಳ್ಳಾರಿ. ಅ. 23: : (ದೇವರಗುಡ್ಡ) ನೆರೆಯ  ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಹೊಳಗುಂದಿ ಮಂಡಲದ ದೇವರಗುಡ್ಡದಲ್ಲಿ ಗುರುವಾರ ಮುಂಜಾನೆ ಶ್ರೀ ಮಾಳ ಮಲ್ಲೇಶ್ವರ ಸ್ವಾಮಿಯ ವಾರ್ಷಿಕ ಬನ್ನಿ ಉತ್ಸವದ ವೇಳೆ ಸಂಭವಿಸಿದ ಕೋಲಿನಿಂದ ಬಡಿದಾಡುವ  ಘಟನೆಯಲ್ಲಿ  ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಹಲವಾರು ಜನ  ಗಾಯಗೊಂಡ ಘಟನೆ ನಡೆದಿದೆ.
ಮಧ್ಯರಾತ್ರಿಯ ನಂತರ ಶ್ರೀ ಮಾಳ ಮಲ್ಲೇಶ್ವರ ಸ್ವಾಮಿಯ ಉತ್ಸವ ಮೂರ್ತಿಗಳನ್ನು ಬೆಟ್ಟದಿಂದ ಕೆಳಗಿಳಿಸಿ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ನೆರನಿಕಿ, ನೆರನಿಕಿ ತಾಂಡಾ ಮತ್ತು ಕೊತ್ತಪೇಟೆ ಆಲೂರು, ಅರಿಕೆರೆ, ಎಲ್ಲಾರ್ಥಿ ಸೇರಿದಂತೆ ನೆರೆಯ ಗ್ರಾಮಗಳ ಜನರು ಕೋಲುಗಳನ್ನು ಹಿಡಿದು ಎದುರಾದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಆರಂಭವಾದ ಕಾಳಗವು ತೀವ್ರ ಸಂಘರ್ಷಕ್ಕೆ ತಿರುಗಿದ್ದು ಈ ಘಟನೆಯಲ್ಲಿ  ಮಹಿಳೆಯರು, ಯುವಕರು ಹಾಗೂ ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ.
ಘರ್ಷಣೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಆಲೂರು ನಿವಾಸಿ, 28 ವರ್ಷದ ಪೋತುರಾಜು ಎಂದು ಗುರುತಿಸಲಾಗಿದೆ.  
ಪೊಲೀಸರ ಮಾಹಿತಿ ಪ್ರಕಾರ, ಉತ್ಸವಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. ಅವರಲ್ಲಿ ಸುಮಾರು 30 ಸಾವಿರ ಮಂದಿ ನೇರವಾಗಿ ಘರ್ಷಣೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಕರ್ನೂಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ಪಾಟೀಲ್ ಅವರ ಮೇಲ್ವಿಚಾರಣೆಯಲ್ಲಿ ಸುಮಾರು ಒಂದು ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಆದರೂ, ಸುಮಾರು ಎರಡು ಗಂಟೆಗಳ ಕಾಲ ನಡೆದ ಘರ್ಷಣೆಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡಿದ ಬಳಿಕವೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಯಿತು.
ಇದೇ ವೇಳೆ, ಶ್ರೀ ಮಾಳ ಮಲ್ಲೇಶ್ವರ ತಾತನ ಕಾರ್ಣಿಕದ ನುಡಿಯೂ ಭಕ್ತರಲ್ಲಿ ಕುತೂಹಲ ಮೂಡಿಸಿದೆ. “ಮಲ್ಲಿಗೆ ಹೂವ ನಿಂದ, ಗಂಗೆ ಮಾಳೆ ನಿಂತಿಳ ಎಚ್ಚರ, 7900 ನಗ ಹಳ್ಳಿ, 3400 ಒಕ್ಕಳ ಜೋಳ, 3661 ಆದಿತು” ಎಂಬ ನುಡಿಯ ಅರ್ಥದ ಕುರಿತು ಭಕ್ತರು ಚರ್ಚಿಸುತ್ತಿದ್ದಾರೆ. ನುಡಿಯಲ್ಲಿನ ಪದಗಳ ನಿಖರ ಅರ್ಥವನ್ನು ದೃಢಪಡಿಸದೆ ನಿರ್ದಿಷ್ಟ ಭವಿಷ್ಯವಾಣಿ ಎಂದು ವ್ಯಾಖ್ಯಾನಿಸುವುದು ಸೂಕ್ತವಲ್ಲ ಎಂದು ಭಕ್ತರು ಅಭಿಪ್ರಾಯಪಟ್ಟಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ