LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರತಿ ಕುಟುಂಬಕ್ಕೆ ತಿಂಗಳಿಗೊಂದು ಎಲ್‌ಪಿಜಿ ಸಿಲಿಂಡರ್..!

ಬೆಂಗಳೂರು: ಪ್ರತಿ ಕುಟುಂಬಕ್ಕೆ ತಿಂಗಳಿಗೊಂದು ಎಲ್‌ಪಿಜಿ ಸಿಲಿಂಡರ್ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಅಡುಗೆ ಅನಿಲ ಸಮಸ್ಯೆ ಕುರಿತಾಗಿ ಕಾಂಗ್ರೆಸ್ ಸದಸ್ಯೆ ಹೆಚ್.ಡಿ. ರಂಗನಾಥ್ ಪ್ರಸ್ತಾಪಿಸಿ ನಡೆದ ಚರ್ಚೆಯ ನಂತರ ಸಚಿವರು ಉತ್ತರ ನೀಡಿದ್ದಾರೆ. ಇಸ್ರೇಲ್ –ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದಿಂದ ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ನಿರ್ಮಾಣವಾಗಿದೆ. ಆದರೂ ಪ್ರತಿ ತಿಂಗಳು ಒಂದು ಕುಟುಂಬಕ್ಕೆ ಒಂದು ಎಲ್.ಪಿ.ಜಿ. ಸಿಲಿಂಡರ್ ಪೂರೈಸುತ್ತೇವೆ. ದೇಶ ಸಂಕಷ್ಟದಲ್ಲಿರುವಾಗ ಜನ ಸಹಕರಿಸಬೇಕು ಎಂದು ಹೇಳಿದ್ದಾರೆ.

ಅಗತ್ಯವಿರುವ ಎಲ್‌ಪಿಜಿಯಲ್ಲಿ ಶೇಕಡ 70ರಷ್ಟು ವಿದೇಶದಿಂದಲೇ ಬರಬೇಕಿದೆ. ಯುದ್ಧದ ಕಾರಣದಿಂದ ಕಚ್ಚಾ ತೈಲ ಮತ್ತು ಎಲ್.ಪಿ.ಜಿ. ದೇಶಕ್ಕೆ ಬರುತ್ತಿಲ್ಲ. ಉಳಿದಂತೆ ಶೇಕಡ 30ರಷ್ಟು ಎಲ್‌ಪಿಜಿ ಉತ್ಪಾದನೆ ನಮ್ಮ ದೇಶದಲ್ಲಿ ಆಗುತ್ತಿದೆ. ಆ ಎಲ್‌ಪಿಜೆಯಿಂದ ಗೃಹ ಬಳಕೆಗೆ ಸಮಸ್ಯೆಗೆ ಆಗದಂತೆ ಪೂರೈಕೆ ಮಾಡಬಹುದು. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

14 ಕೆಜಿ ಸಿಲಿಂಡರ್ ನಾಲ್ಕೈದು ಮಂದಿ ಸದಸ್ಯರಿರುವ ಕುಟುಂಬಕ್ಕೆ 25 ದಿನಕ್ಕಿಂತಲೂ ಹೆಚ್ಚು ಕಾಲ ಬರುತ್ತದೆ. ಈ ಅಂದಾಜಿನಲ್ಲಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಒಂದು ಸಿಲಿಂಡರ್ ಪೂರೈಸುತ್ತೇವೆ. ಮಿತವ್ಯಯಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026