LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಪರೇಷನ್‌ ಅಖಾಲ್‌ : ಇಬ್ಬರು ಸೈನಿಕರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ನಿನ್ನೆ ರಾತ್ರಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಮೂವರು ಸೈನಿಕರು ಗಾಯಗೊಂಡಿದ್ದು, ಇದರೊಂದಿಗೆ ಕಳೆದ ಒಂಬತ್ತು ದಿನಗಳಿಂದ ನಡೆಯುತ್ತಿರುವ ಆಪರೇಷನ್‌ನಲ್ಲಿ ಗಾಯಗೊಂಡ ಸೈನಿಕರ ಸಂಖ್ಯೆ ಹತ್ತಕ್ಕೇರಿದೆ.

ಶುಕ್ರವಾರ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಮಡಿದ ವೀರ ಯೋಧರನ್ನು ಕೆ.ಪ್ರೀತ್‌ಪಾಲ್ ಸಿಂಗ್ ಮತ್ತು ಹರ್ಮಿಂದರ್‌ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ಈ ತ್ಯಾಗಕ್ಕೆ ಅವರನ್ನು ಚಿನಾರ್ ಕಾರ್ಪ್ಸ್ ಗೌರವಿಸುತ್ತದೆ. ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ ಎಂದು ಭಾರತೀಯ ಸೇನೆ ಎಕ್ಸ್​​​​ ಮೂಲಕ ಸಂತಾಪ ಸೂಚಿಸಿದೆ.



ಆಪರೇಷನ್‌ ಅಖಾಲ್‌ನಲ್ಲಿ ಈಗಾಗಲೇ ಆರು ಭಯೋತ್ಪಾದಕರನ್ನು ಸಾಯಿಸಲಾಗಿದೆ. ಇನ್ನೂ ಕೆಲವು ಭಯೋತ್ಪಾದಕರು ಈ ದಟ್ಟ ಗುಡ್ಡಗಾಡು ಪ್ರದೇಶಗಳಲ್ಲಿರುವ ಗುಹೆಗಳಲ್ಲಿ ಅವಿತುಕೊಂಡಿದ್ದು, ಅವರನ್ನು ನಿಗ್ರಹಿಸಲು ಕಾರ್ಯಾಚರಣೆ ಮುಂದುವರಿದೆ.ಭಯೋತ್ಪಾದಕರನ್ನು ಪತ್ತೆ ಮಾಡಿ ಮಟ್ಟ ಹಾಕುವ ಕಾರ್ಯಚರಣೆ ಮುಂದುವರಿದಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್​​ನಲ್ಲಿ ತಿಳಿಸಿದೆ. ಆಗಸ್ಟ್​​​ 1ರಿಂದ ಆಪರೇಷನ್‌ ಅಖಾಲ್‌ ಶುರುವಾಗಿದ್ದು, ಇಂದು ಒಂಬತ್ತನೇ ದಿನ ಕಾರ್ಯಚರಣೆ ನಡೆದಿದೆ ಎಂದು ಸೇನೆ ಹೇಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026