ವಿಪಕ್ಷನಾಯಕ ಆರ್ ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ.!
ಬೆಂಗಳೂರು : ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶರಣಗೌಡ ಅವರಿಗೆ ಈಗಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳು ಸಹ ಇದ್ದು, ಪತ್ನಿ ಶೈಲಶ್ರೀ ಅವರು ಮಾಗಡಿ ಸಂಚಾರ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದಾರೆ. ಇನ್ನು ಶರಣಗೌಡ ಸಹ ಪೊಲೀಸ್ ಬೆಂಗಾವಲು ವಾಹನ ಚಾಲಕರಾಗಿದ್ದು, ಕಳೆದ ಐದು ವರ್ಷಗಳಿಂದ ಅಶೋಕ್ ಅವರ ಬೆಂಗಾವಲು ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ವಿಷಯ ತಿಳಿಯುತ್ತಿದ್ದಂತೆಯೇ ಆರ್ ಅಶೋಕ್ ಸಹ ವಿಕ್ಟೋರಿಯಾ ಆಸ್ಪತ್ರೆಯತ್ತ ದೌಡಾಯಿಸಿದ್ದು, ಪೊಲೀಸ್ ತನಿಖೆಯಲ್ಲಿ ಶರಣಗೌಡ ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.