Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲ

ಹೊಳೆನರಸೀಪುರ : ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದಲ್ಲಿ ವಿದ್ಯುತ್ ವಿತರಣೆ ಮಾಡಲು ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕ HD ರೇವಣ್ಣ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಪತ್ರ ಬರೆಯುತ್ತೇನೆ ಮತ್ತು ನನ್ನ ಸಂಪೂರ್ಣ ಬೆಂಬಲ ನಿಮಗೆ  ಇರುತ್ತೆ ಎಂದು ವಾಗ್ದಾನ ನೀಡಿದರು 

news_1781597053_0_846.webp

 

ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನೌಕರರ ಒಕ್ಕೂಟದ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಮನವಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 

ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗೀಕರಣಗೊಳಿಸಿ ಖಾಸಗಿ ಕಂಪನಿಗಳಿಗೆ ಅವಕಾಶ ನೀಡಿದಲ್ಲಿ ಸರ್ಕಾರದ ನಿಯಂತ್ರಣ ಕಡಿಮೆಯಾಗುವ ಸಾಧ್ಯತೆ ಇದ್ದು, ಇದರಿಂದ ನೌಕರರು, ಸಾರ್ವಜನಿಕರು, ರೈತರು ಹಾಗೂ ಕೈಗಾರಿಕೋದ್ಯಮಿಗಳ ಹಿತಾಸಕ್ತಿಗೆ ಧಕ್ಕೆಯಾಗಬಹುದು ಎಂಬ ಆತಂಕವನ್ನು ಕೆಪಿಟಿಸಿಎಲ್ ನೌಕರರ ಒಕ್ಕೂಟದ ಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ಶಕ್ತಿ ಕಾಯ್ದೆ–2003ರ ಸಂಬಂಧಿತ ನಿಯಮಾವಳಿಗಳ ಅನ್ವಯ ಟಾಟಾ ಪವರ್ ಕಂಪನಿ ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸಿ ತಕ್ಷಣವೇ ತಿರಸ್ಕರಿಸಬೇಕು. ಜೊತೆಗೆ ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆ ಸರ್ಕಾರದ ಅಧೀನದಲ್ಲಿಯೇ ಮುಂದುವರಿಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ರಾಜ್ಯದ ಜನಹಿತ, ನೌಕರರ ಹಿತಗಳಿಗೆ ಈ ಕಾಯ್ದೆಯನ್ನು ವಿರೋಧಿಸಬೇಕು ಎಂದು ವಿದ್ಯುತ್ ಕ್ಷೇತ್ರದ  ಹಾಗೂ ಕೆಪಿಟಿಸಿಎಲ್ ನೌಕರರ ಒಕ್ಕೂಟದ ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ