Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆರೆಂಜ್ ಕ್ಯಾಪ್, ಸರಣಿಶ್ರೇಷ್ಠ ಹಲವು ಪ್ರಶಸ್ತಿ ಗೆದ್ದ ವೈಭವ

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆವೃತ್ತಿ ಆರಂಭವಾದಾಗಿನಿಂದಲೂ ಅತೀ ಹೆಚ್ಚು ಚರ್ಚೆಗೆ ಒಳಗಾದ ಆಟಗಾರ ಅಂದರೆ, ಅದು ವೈಭವ್ ಸೂರ್ಯವಂಶಿ. 15 ವರ್ಷದ ಅವರು, ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕವೇ ವಿಶ್ವಶ್ರೇಷ್ಠ ಬೌಲರ್‌ಗಳಿಗೆ ನಡುಕ ಹುಟ್ಟಿಸಿದ್ದಾರೆ.

ಸ್ಫೋಟಕ ಆಟಕ್ಕೆ ಹೆಸರುವಾಸಿಯಾಗಿರುವ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್, ಒಂದೇ ಐಪಿಎಲ್ ಆವೃತ್ತಿಯಲ್ಲಿ ಹತ್ತು ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರ ಆಟದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವು ಕ್ವಾಲಿಫೈಯರ್–2ರವರೆಗೆ ತಲುಪಿತ್ತು. ಅಲ್ಲಿಯೂ ಸೂರ್ಯವಂಶಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ, ಗುಜರಾತ್ ಟೈಟನ್ಸ್ ವಿರುದ್ಧ ಸೋಲುವ ಮೂಲಕ ಟೂರ್ನಿಯಿಂದ ಹೊರಬಿದ್ದಿತ್ತು. ಇದರ ಹೊರತಾಗಿಯೂ ಅವರು ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

ಸರಣಿಶ್ರೇಷ್ಠ

ಟೂರ್ನಿಯುದ್ಧಕ್ಕೂ ವೈಭವ್ ಸೂರ್ಯಂಶಿ ಅಮೋಘ ಪ್ರದರ್ಶನ ನೀಡಿದ್ದಾರೆ. ಅವರ ರಾಜಸ್ಥಾನ ರಾಯಲ್ಸ್ ತಂಡವು ಕ್ವಾಲಿಫೈಯರ್‌–2ರಲ್ಲಿ ಹೊರನಡೆದರೂ, ಅವರು ನೀಡಿದ ಅದ್ಭುತ ಪ್ರದರ್ಶನಕ್ಕಾಗಿ, ಅವರಿಗೆ ‘ಸರಣಿಶ್ರೇಷ್ಠ ಆಟಗಾರ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಆರೆಂಜ್ ಕ್ಯಾಪ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಎರಡನೇ ಸೀಸನ್ ಆಡುತ್ತಿರುವ ಅವರು, ಆಡಿದ 16 ಇನಿಂಗ್ಸ್‌ಗಳಿಂದ 1 ಶತಕ ಮತ್ತು 5 ಅರ್ಧಶತಕ ಸಹಿತ, 49.50 ಸರಾಸರಿಯಲ್ಲಿ 776 ರನ್ ಗಳಿಸಿದ್ದಾರೆ. ಆ ಮೂಲಕ, ಐಪಿಎಲ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆಟಗಾರನಿಗೆ ನೀಡುವ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡರು. 2ನೇ ಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ನಾಯಕ ಶುಭಮನ್ ಗಿಲ್ 732 ರನ್ ಗಳಿಸಿದ್ದಾರೆ.

ಅತಿ ಹೆಚ್ಚು ಸಿಕ್ಸರ್

ಐಪಿಎಲ್ ಸೀಸನ್ ಒಂದರಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ಆಟಗಾರನಿಗೆ ನೀಡುವ ‘ಏಂಜಲ್ ಒನ್ ಸೂಪರ್ ಸಿಕ್ಸರ್ ಆಫ್ ದ ಸೀಸನ್’ ಪ್ರಶಸ್ತಿಯನ್ನು ಸೂರ್ಯವಂಶಿ ಅವರು ತಮ್ಮದಾಗಿಸಿಕೊಂಡಿದ್ದಾರೆ. ಅವರು, 16 ಇನಿಂಗ್ಸ್‌ಗಳಲ್ಲಿ 72 ಸಿಕ್ಸರ್ ಸಿಡಿಸಿದ್ದಾರೆ. ಇದು ಐಪಿಎಲ್ ಇತಿಹಾಸದಲ್ಲಿ ಆಟಗಾರನೊಬ್ಬ ದಾಖಲಿಸಿದ ಅತ್ಯಧಿಕ ಸಿಕ್ಸರ್‌ಗಳಾಗಿವೆ.

ಸೂಪರ್‌ ಸ್ಟ್ರೈಕರ್

ಅತ್ಯಧಿಕ ಸ್ಟ್ರೈಕ್‌ರೇಟ್ ಹೊಂದಿರುವ ಆಟಗಾರನಿಗೆ ನೀಡುವ ‘ಟಾಟಾ ಸಿಯಾರ ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್’ ಪ್ರಶಸ್ತಿಯನ್ನು ಕೂಡ ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡರು. ಅವರು, 237.31ರ ಅದ್ಭುತ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ. ಅವರ ನಂತರದ ಸ್ಥಾನದಲ್ಲಿರುವ ಕೆಕೆಆರ್ ತಂಡದ ಫಿನ್ ಅಲೆನ್ 214ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

ಮೋಸ್ಟ್ ವ್ಯಾಲ್ಯೂಯೇಬಲ್ ಪ್ಲೇಯರ್

ತಂಡಕ್ಕಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರನಿಗೆ ನೀಡುವ ‘ಮೋಸ್ಟ್ ವ್ಯಾಲ್ಯೂಯೇಬಲ್ ಪ್ಲೇಯರ್ ಆಫ್‌ ದಿ ಸೀಸನ್’ ಪ್ರಶಸ್ತಿಯನ್ನು ಕೂಡ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ಅವರು ಆವೃತ್ತಿಯಲ್ಲಿ 776 ರನ್, 237ರ ಸ್ಟ್ರೈಕ್‌ರೇಟ್, 72 ಸಿಕ್ಸರ್ ಬಾರಿಸಿದ್ದಾರೆ.

ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್

‘ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್’ ಐಪಿಎಲ್‌ನಲ್ಲಿ ಅತ್ಯಂತ ಭರವಸೆಯ ಯುವ ಪ್ರತಿಭೆಯನ್ನು ಗುರುತಿಸಲು ನೀಡಲಾಗುವ ಈ ಪ್ರಶಸ್ತಿಯನ್ನು ಕೂಡ ವೈಭವ್ ಸೂರ್ಯವಂಶಿ ಅವರು ತಮ್ಮದಾಗಿಸಿಕೊಂಡಿದ್ದಾರೆ. ಆ ಮೂಲಕ, ಈ ಬಾರಿಯ ಐಪಿಎಲ್‌ನಲ್ಲಿ ಪರ್ಪಲ್ ಕ್ಯಾಪ್ ಹೊರತುಪಡಿಸಿ ಉಳಿದ ಬಹುತೇಕ ಪ್ರಶಸ್ತಿಗಳನ್ನು ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ