Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ತಮಿಳುನಾಡಿಗೆ ದಿನಕ್ಕೆ 3,500 ಕ್ಯುಸೆಕ್ ಹರಿಸಲು ಆದೇಶ

ಹೊಸದಿಲ್ಲಿ, ಜುಲೈ 28: ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಮಂಗಳವಾರ ಶಿಫಾರಸು ಮಾಡಿದೆ. ಈ ನಿರ್ಧಾರ ಜಾರಿಯಾದರೆ ಕರ್ನಾಟಕವು 15 ದಿನಗಳಲ್ಲಿ ಒಟ್ಟು 4.56 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕಾಗುತ್ತದೆ.

ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳ ನೀರಿನ ಸಂಗ್ರಹ, ಮಳೆಯ ಪ್ರಮಾಣ ಹಾಗೂ ಒಳಹರಿವಿನ ಸ್ಥಿತಿಗತಿಗಳನ್ನು ಪರಿಶೀಲಿಸಲು ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಪ್ರಮಾಣದ ನೀರು ಬಿಡುಗಡೆ ಮಾಡುವುದರಿಂದ ಕೆಆರ್‌ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳ ನೀರಿನ ಸಂಗ್ರಹದ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈಗಾಗಲೇ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ನೀರಿನ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಶಿಫಾರಸು ಆತಂಕಕ್ಕೆ ಕಾರಣವಾಗಿದೆ.

ಸಭೆಯಲ್ಲಿ ಕರ್ನಾಟಕದ ಪರವಾಗಿ ಅಧಿಕಾರಿಗಳು, ಜಲಾಶಯಗಳಲ್ಲಿ ಸಮರ್ಪಕ ಪ್ರಮಾಣದ ನೀರಿನ ಸಂಗ್ರಹ ಇಲ್ಲ. ಸ್ಥಳೀಯ ರೈತರ ಬೆಳೆಗಳಿಗೆ ಹಾಗೂ ನಗರ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕಿರುವುದರಿಂದ ಪ್ರಸ್ತುತ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಸಮಿತಿಯ ಗಮನಕ್ಕೆ ತಂದರು.

ಆದರೆ ಕರ್ನಾಟಕದ ವಾದವನ್ನು ಒಪ್ಪದ ಸಿಡಬ್ಲ್ಯೂಆರ್‌ಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದೆ.

ಈ ಶಿಫಾರಸನ್ನು ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ)ದ ಮುಂದೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕಾನೂನು ತಜ್ಞರು ಹಾಗೂ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಮಾಲೋಚನೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಸಿಡಬ್ಲ್ಯೂಆರ್‌ಸಿ ಶಿಫಾರಸನ್ನು ಸಿಡಬ್ಲ್ಯೂಎಂಎ ಮುಂದೆ ಪ್ರಶ್ನಿಸಲು ಅವಕಾಶವಿದ್ದರೂ, ಅಂತಿಮ ತೀರ್ಮಾನವನ್ನು ಪ್ರಾಧಿಕಾರವೇ ಕೈಗೊಳ್ಳಲಿದೆ. ಒಂದು ವೇಳೆ ಪ್ರಾಧಿಕಾರವೂ ನೀರು ಬಿಡುಗಡೆ ಮಾಡುವಂತೆ ಆದೇಶಿಸಿದರೆ, ಕರ್ನಾಟಕವು ಅದರ ಪಾಲನೆ ಮಾಡಬೇಕಾಗುತ್ತದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ