ಐದು ವರ್ಷ ನಮ್ಮ ತಂದೆ ಸಿದ್ದರಾಮಯ್ಯ ಮುಖ್ಯ ಮಂತ್ರಿ.!
ಮೈಸೂರು: ಐದು ವರ್ಷ ನಮ್ಮ ತಂದೆ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ, ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ವಿಚಾರ ನನಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿ ಪ್ರಕಾರ ಹೈಕಮಾಂಡ್ ಆಗ್ಲಿ ಬೇರೆ ನಾಯಕರಾಗಲಿ ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ. ಹೀಗಾಗಿ ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ ಎಂದರು.
ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ. ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ದರೆ ಶಾಸಕರು ಸುಮ್ಮನೆ ಇರುತ್ತಿರಲಿಲ್ಲ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು ಎಂದರು. ಸಂಪುಟ ಪುನಾರಚನೆ ಬಗ್ಗೆ ತಂದೆಯ ಜೊತೆ ಚರ್ಚೆ ಮಾಡಿಲ್ಲ.
ತಂದೆಯೇ ಡಿಸೆಂಬರ್ ನಲ್ಲಿ ಸಂಪುಟ ಪುನಾರಚನೆ ಮಾಡುವುದಾಗಿ ಹೇಳಿದ್ದಾರೆ. ಜಿಬಿಎ ಸಭೆಗೆ ಹೋಗಿದ್ದೇ. ಗ್ರೇಟರ್ ಬೆಂಗಳೂರು ಬಗ್ಗೆ ಸಾಕಷ್ಟು ಮಾಹಿತಿ ಕೊಟ್ಟರು. ನಾನು ಪರಿಷತ್ ಸ್ಥಾನಕ್ಕೆ ನಾನು ಬೆಂಗಳೂರು ವಿಳಾಸ ಕೊಟ್ಟಿದ್ದೇನೆ. ಹೀಗಾಗಿ ನಾನು ಸದಸ್ಯನಾಗಿದ್ದೇನೆ. ನಾನು ವರುಣ ಕ್ಷೇತ್ರದ ಮತದಾರ ಎಂದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.