LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತುರುವನೂರು ಸರ್ಕಾರಿ ಪಿಯು ಕಾಲೇಜಿನ ಕಲಾ ವಿಭಾಗದ ಪಿ.ವಾಣಿ ಜಿಲ್ಲೆಗೆ ಟಾಪರ್

 

ಚಿತ್ರದುರ್ಗ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರಲ್ಲಿ ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಪಿ.ವಾಣಿ ಗ್ರಾಮೀಣ ವಿದ್ಯಾರ್ಥಿನಿಯು ಮರು ಮೌಲ್ಯಮಾಪನದಲ್ಲಿ 581 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಪಿ.ವಾಣಿ ಅವರು ಮೊದಲಿಗೆ 578 ಅಂಕಗಳನ್ನು ಪಡೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದರು. ರಾಜ್ಯಶಾಸ್ತ್ರ ವಿಷಯದಲ್ಲಿ 90 ಅಂಕಗಳು ಬಂದಿದ್ದರಿಂದ ಆ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನಕ್ಕೊಳಪಡಿಸಿದಾಗ 3 ಅಂಕಗಳು ಸೇರ್ಪಡೆಗೊಂಡು 93 ಅಂಕಗಳು ಬಂದಿದ್ದರಿಂದ ಒಟ್ಟು 581 ಅಂಕಗಳೊಂದಿಗೆ ಶೇ.96.83 ರಷ್ಟು ಫಲಿತಾಂಶ ದಾಖಲಿಸಿ ಕಲಾ ವಿಭಾಗದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ  ವಿದ್ಯಾರ್ಥಿನಿ ಪಿ ವಾಣಿಯ ಈ ಅತ್ಯುತ್ತಮ ಸಾಧನೆಗೆ ಚಳ್ಳಕೆರೆ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಟಿ.ರಘುಮೂರ್ತಿ, ಉಪಾಧ್ಯಕ್ಷ ಟಿ.ಬಾಬುರೆಡ್ಡಿ, ಸದಸ್ಯರು, ಕಾಲೇಜಿನ ಪ್ರಾಚಾರ್ಯ ಡಾ.ಬಿ.ಕೃಷ್ಣಪ್ಪ ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026