LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನದಿಯಲ್ಲಿ ಶವವಾಗಿ ಪತ್ತೆ

ಮಂಡ್ಯ : ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ (70) ಅವರು ಮಂಡ್ಯದ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಶವವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೈಸೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿಯೊಮದಿಗೆ ವಾಸವಾಗಿದ್ದ ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರು, ಮೇ 7ರಂದು ಮನೆಯಿಂದ ನಾಪತ್ತೆಯಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ಶವ ಮೇಲೆ ತೆಗೆದು ನೋಡಿದಾಗ ವಿಜ್ಞಾನಿಯ ಗುರುತು ಪತ್ತೆಯಾಗಿದೆ. ನದಿ ದಡದಲ್ಲಿ ಅವರ ಸ್ಕೂಟರ್ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಡಾ.ಸುಬ್ಬಣ್ಣ ಅಯ್ಯಪ್ಪನ್ ಮನೆಯಿಂದ ಹೋದವರು ವಾಪಸ್ಸಾಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಈ ಬಗ್ಗೆ ಶ್ರೀರಂಗಪಟ್ಟಣ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರು ಮೂರು ದಿನಗಳ ಹಿಂದೆ ಶ್ರೀರಂಗಪಟ್ಟಣದ ಸಾಯಿಬಾಬಾ ಆಶ್ರಮದ ಬಳಿ ನದಿಗೆ ಹಾರಿದ್ದಾರೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026