LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಹಲ್ಗಾಮ್‌ ದಾಳಿ : ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ಏ.22ರಂದು 26 ಪ್ರವಾಸಿಗರನ್ನು ಕೊಂದು ಹಾಕಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ.

ಬಂಧಿತರಿಬ್ಬರು ಪಹಲ್ಗಾಮ್ ನಿವಾಸಿಗಳಾಗಿದ್ದು, ಪಾಕಿಸ್ತಾನದ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರಿಗೆ ಆಶ್ರಯ ನೀಡಿದ್ದರು. ತನಿಖೆ ವೇಳೆ ಬಂಧಿತರು ದಾಳಿಕೋರರ ಗುರುತುಗಳನ್ನು ಬಹಿರಂಗಪಡಿಸಿದ್ದು, ಉಗ್ರರು ಪಾಕಿಸ್ತಾನಿ ಪ್ರಜೆಗಳು ಎಂದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.



ಏಪ್ರಿಲ್ 22ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರನ್ನು ಹತ್ಯೆಗೈದಿದ್ದರು. ಇದಾದ ಬಳಿಕ ಭಾರತ ಹಾಗೂ ಪಾಕ್‌ ನಡುವೆ ಉದ್ವಿಗ್ನತೆ ಉಂಟಾಗಿತ್ತು. ಭಾರತೀಯ ಸೇನೆ ಆಪರೇಷನ್‌ ಸಿಂದೂರ ಕಾರ್ಯಾಚರಣೆ ಮಾಡಿ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಹಲವಾರು ಉಗ್ರರನ್ನು ಹೊಡೆದು ಹಾಕಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026