LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಾಕ್ ಪರ ಬೇಹುಗಾರಿಕೆ; ರಾಜಸ್ಥಾನದಲ್ಲಿ ಆರೋಪಿ ಬಂಧನ

ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಗುಪ್ತಚರ ಇಲಾಖೆ ಅಧಿಕಾರಿಗಳು ಅಲ್ವಾರ್‌ನ ಗೋವಿಂದಗಢ ನಿವಾಸಿಯೊಬ್ಬನನ್ನು ಬಂಧಿಸಿದ್ದಾರೆ.

ಬ0ಧಿತ ಆರೋಪಿಯನ್ನು ಮಂಗತ್ ಸಿಂಗ್ (32) ಎಂದು ಗುರುತಿಸಲಾಗಿದೆ. ಅಲ್ವಾರ್‌ನ ಕಂಟೋನ್ಮೆ0ಟ್ ಪ್ರದೇಶದ ಕಣ್ಗಾವಲು ಸಮಯದಲ್ಲಿ ಮಂಗತ್ ಸಿಂಗ್ ಬೇಹುಗಾರಿಕೆಯಲ್ಲಿ ತೊಡಗಿರುವುದು ಗೊತ್ತಾಗಿತ್ತು.

ಬಳಿಕ ಅಧಿಕಾರಿಗಳು ವಿಚಾರಣೆ ನಡೆಸಿದಾಗ, ಆರೋಪಿ ಪಾಕ್ ಸಂಪರ್ಕದಲ್ಲಿರುವುದು ತಿಳಿದು ಬಂದಿದೆ. 1923ರ ಅಧಿಕೃತ ರಹಸ್ಯ ಕಾಯ್ದೆಯ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆಯ ಸಮಯದಲ್ಲಿ ಇಶಾ ಶರ್ಮಾ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಾಕಿಸ್ತಾನದ ಮಹಿಳಾ ಹ್ಯಾಂಡ್ಲರ್, ಆರೋಪಿಯನ್ನು ಹನಿಟ್ರ‍್ಯಾಪ್ ಮಾಡಿದ್ದಳು ಎಂದು ತಿಳಿದುಬಂದಿದೆ. ಬೇಹುಗಾರಿಕೆ ಚಟುವಟಿಕೆಗಳಲ್ಲಿ ಸಹಕರಿಸಿದ್ದಕ್ಕಾಗಿ ಪಾಕ್ ಹ್ಯಾಂಡ್ಲರ್ ಸಿಂಗ್‌ಗೆ ಹಣಕಾಸಿನ ನೆರವು ನೀಡಿದ್ದಳು ಎಂಬುದು ತಿಳಿದು ಬಂದಿದೆ. ಹಣಕ್ಕಾಗಿ ಆರೋಪಿ ಭಾರತದ ರಾಷ್ಟ್ರೀಯ ಭದ್ರತೆಗೆ ಸಂಬ0ಧಿಸಿದ ಸೂಕ್ಷ್ಮ ಮಾಹಿತಿಯನ್ನು ನೀಡಿದ್ದಾನೆ.

ಈತ ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದ ಎಂದು ಪೊಲೀಸರು ಹೇಳಿದ್ದಾರೆ.ರಾಜಸ್ಥಾನ ಪೊಲೀಸರು, ವಿಶೇಷವಾಗಿ ಸಿಐಡಿ ಗುಪ್ತಚರ ಘಟಕ ಇಂತಹ ಬೇಹುಗಾರಿಕೆ ಚಟುವಟಿಕೆಗಳನ್ನು ಪತ್ತೆಹಚ್ಚಲು ತೀವ್ರ ನಿಗವಹಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026