LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶ್ರೀ ಶಿವಲಿಂಗಾನಂದ ಶ್ರೀಗಳ ಪಲ್ಲಕ್ಕಿ ಉತ್ಸವ ಹಾಗೂ ಜನಪದ ಉತ್ಸವ.!

 

ಚಿತ್ರದುರ್ಗ: ಕಳೆದ 11 ರಿಂದ ನಗರದ ಕರುವಿನ ಕಟ್ಟೆ ವೃತ್ತದಲ್ಲಿನ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ ನಡೆಯುತ್ತಿರುವ ಶಿವನಾಮ ಸಪ್ತಾಹದ 96ನೇ ಶಿವರಾತ್ರಿ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಇಂದು ಶ್ರೀ ಶಿವಲಿಂಗಾನಂದ ಶ್ರೀಗಳ ಪಲ್ಲಕ್ಕಿ ಉತ್ಸವ ಹಾಗೂ ಜನಪದ ಉತ್ಸವ ನಡೆಯಿತು.

ಶ್ರೀ ಕಬೀರಾನಂದಸ್ವಾಮಿ ಕ್ರೀಡಾ ಮತ್ತು ಸಾಂಸ್ಕøತಿಕ ಸಂಘ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಶ್ರೀಗಳ ಪಲ್ಲಕ್ಕಿ ಹಾಗೂ ಜಾನಪದ ಉತ್ಸವಕ್ಕೆ 96ನೇ ಮಹಾ ಶಿವರಾತ್ರಿ ಮಹೋತ್ಸವದ ಅಧ್ಯಕ್ಷರಾದ ಎಸ್,ಭಾಸ್ಕರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ್, ನಾಗರಾಜ್ ಸಗಂ, ಸತೀಶ್, ಓಂಕಾರ್, ರುದ್ರೇಶ್, ಪ್ರಭಂಜನ್, ಗೋಪಾಲಸ್ವಾಮಿ ನಾಯಕ್, ಜಯ್ಯಣ್ಣ, ಪೈಲ್ವಾನ್ ತಿಪ್ಪೇಸ್ವಾಮಿ ನಿರಂಜನ ಮೂರ್ತಿ, ಗಣಪತಿ ಶಾಸ್ತ್ರಿ, ತಿಪ್ಪೇಸ್ವಾಮಿ ಯೋಗಿಶ್ ಸೇರಿದಂತೆ

ಈ ಉತ್ಸವದಲ್ಲಿ ಚಂಡೆ, ಕೀಲುಕುದುರೆ, ತಮಟೆ, ಜಾಂಜ್ ನೃತ್ಯ, ಲಂಬಾಣಿ ನೃತ್ಯ, ಖಾಸಬೇಡರ ಪಡೆ, ಡೊಳ್ಳು ಕುಣಿತ, ಕೋಲಾಟ, ಭಜನೆ, ತಟ್ಟೆರಾಯ, ಶಾರದಾ ಬ್ರಾಸ್ ಬ್ಯಾಂಡ್, ಕಹಳೆ, ಉರಿಮೆ, ಗೂರವಪ್ಪ, ಛತ್ರಿ ಚಾಮರ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಈ ಉತ್ಸವದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಿದರು.

ಇದರೊಂದಿಗೆ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಜ್ಞಾನ ವಿಕಾಸ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ, ಶ್ರೀ ಸದ್ಗುರು ಕಬೀರಾನಂದಸ್ವಾಮಿ ನರ್ಸಿಂಗ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಬಿ.ಇಡಿ. ಪಿಯು ಕಾಲೇಜು ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು. ಶ್ರೀ ಕಬೀರಾನಂದ ಸ್ವಾಮಿ ಆಂಗ್ಲ ಮತ್ತು  ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದೇಶದ ವಿವಿಧ ರಾಜ್ಯದ ಉಡುಗೆಯನ್ನು ತೊಡುವುದರ ಮೂಲಕ ಭಾವೈಕ್ಯತೆಯನ್ನು ಮೆರೆದಿದ್ಧಾರೆ, ಇದೇ ರೀತಿ ಮ್ತತೊಂದು ಶಾಲೆಯ ಮಕ್ಕಳು ರಾಜ್ಯದ ವಿವಿಧ ಜಿಲ್ಲೆಯ ಸಾಂಸ್ಕøತಿಕ ಉಡುಗೆಯನ್ನು ಧರಿಸುವುದರ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಉತ್ಸವವೂ ನಗರದ ಕಬೀರಾನಂದಾಶ್ರಮದಿಂದ ಪ್ರಾರಂಭವಾಗಿ ಮೈಸೂರ್ ಕಫೆ, ದೊಡ್ಡಪೇಟೆ, ಉಚ್ಚಂಗಿ ಯಲ್ಲಮ್ಮ ದೇವಾಲಯ, ಚಿಕ್ಕಪೇಟೆ, ಆನೆಬಾಗಿಲು, ಸಂತೇಪೇಟೆ ವೃತ್ತ, ಮೈಸೂರ್ಬ್ಯಾಂಕ್ ವೃತ್ತ, ಧರ್ಮ ಶಾಲಾ ರಸ್ತೆ, ಇ.ಪಿ.ಬ್ರದರ್ಸ್, ಶಾರದ ಬ್ರಾಸ್ ಬ್ಯಾಂಡ್ ಮನೆ ಮುಂಭಾಗ, ರಂಗಯ್ಯನ ಬಾಗಿಲು, ಉಜ್ಜಯಿನಿ ಮಠ, ಕರುವಿನಕಟ್ಟೆ ವೃತ್ತದಿಂದ ಶ್ರೀಮಠವನ್ನು ತಲುಪಿತು.

ದಾರಿಯುದ್ದಕ್ಕೂ ಭಕ್ತಾಧಿಗಳು ಮನೆಯ ಮುಂಭಾಗದಲ್ಲಿ ನೀರು ಹಾಕಿ ರಂಗೋಲೆಯನ್ನು ಬಿಡುವುದರ ಮೂಲಕ ಮೆರವಣಿಗೆಯನ್ನು ಸ್ವಾಗತಿಸಿದರು. ಶ್ರೀಗಳ ಭಕ್ತಾಧಿಗಳು ಸ್ವಾಮಿಗಳ ದರ್ಶನವನ್ನು ಪಡೆಯುವ ಸಲುವಾಗಿ ಸಾಲುಗಟ್ಟಿ ನಿಂತಿದ್ದು, ಶ್ರೀಗಳಿಗೆ ಫಲ ಮತ್ತು ಹಾರ ಹಾಗೂ ಕಾಣಿಕೆಯನ್ನು ನೀಡುವುದರ ಮೂಲಕ ಶ್ರೀಗಳ ದರ್ಶನಾರ್ಶೀವಾದವನ್ನು ಪಡೆದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026